ಕಲಬುರಗಿ: ಜಿಲ್ಲೆಯ ಅಫಜಲಪುರ ಕ್ಷೇತ್ರದ ಚುನಾವಣೆ ಈ ಬಾರಿ ತೀವ್ರ ಜಿದ್ದಾಜಿದ್ದಿನ ಕಣವಾಗಿದೆ. ಈವರೆಗಿನ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಡುವೆ ಪೈಪೋಟಿ ನಡೆಯುತ್ತಿದ್ದ ಕ್ಷೇತ್ರದಲ್ಲಿ ಈ ಬಾರಿ ಸಹೋದರರ ನಡುವೆ ಪೈಪೋಟಿ ನಡೆಯಲಿದೆ.
ಅಫಜಲಪುರ ಬಿಜೆಪಿ ಟಿಕೆಟ್ಗಾಗಿ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಮತ್ತು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ನಿತಿನ್ ಗುತ್ತೇದಾರ್ ನಡುವೆ ಬಿಗ್ ಪೈಟ್ ಆರಂಭವಾಗಿತ್ತು. ಆದ್ರೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ಗೆ ಬಿಜೆಪಿ ಟಿಕೆಟ್ ನೀಡಿದೆ.
ಇದರಿಂದ ಅವರ ಸಹೋದರ ನಿತಿನ್ ಗುತ್ತೇದಾರ್ ಆಕ್ರೋಶಗೊಂಡಿದ್ದು, ಮಾಲೀಕಯ್ಯ ಗುತ್ತೇದಾರ್ ವಿರುದ್ಧ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
“ಕಳೆದ ಕೆಲ ವರ್ಷಗಳಿಂದ ನಾನು ಕ್ಷೇತ್ರದಲ್ಲಿ ಓಡಾಡುತ್ತಿದ್ದೇನೆ. ಇನ್ನು ತನ್ನ ಸಹೋದರ ಮಾಲೀಕಯ್ಯ ಗುತ್ತೇದಾರ್ ಕೂಡ ಈ ಬಾರಿ ಟಿಕೆಟ್ ನನಗೆ ಬಿಟ್ಟು ಕೋಡುವುದಾಗಿ ಪ್ರಮಾಣ ಮಾಡಿ ಹೇಳಿದ್ದರು. ಆದ್ರೆ, ಇದೀಗ ಅವರೇ ಟಿಕೆಟ್ ಪಡೆದಿದ್ದಾರೆ. ಹೀಗಾಗಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದಿದ್ದಾರೆ. ಜೊತೆಗೆ ಈಗಾಗಲೇ ಒಂದು ಸಲ ನಾಮಪತ್ರ ಸಲ್ಲಿಸಿರುವ ನಿತಿನ್ ಗುತ್ತೇದಾರ್, ಇಂದು(ಏ.19) ಮತ್ತೊಮ್ಮೆ ದೊಡ್ಡ ಮಟ್ಟದಲ್ಲಿ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡಿ ನಾಮಪತ್ರ ಸಲ್ಲಿಸಲು ಸಿದ್ದತೆ ಮಾಡಿಕೊಂಡಿದ್ದಾರೆ.