Home ಟಾಪ್ ಸುದ್ದಿಗಳು ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶ

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶ

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಕಣಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಎರಡು ಫಾರ್ಮ್ಗಳಲ್ಲಿ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮಲೆಯಂಪಾಡಿಯಲ್ಲಿರುವ ಖಾಸಗಿ ಫಾರ್ಮ್ ಗಳಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿರುವುದಾಗಿ ಜಿಲ್ಲಾ ಪಶುಸಂಗೋಪನಾ ಅಧಿಕಾರಿಗಳು ದೃಢಪಡಿಸಿದ್ದಾರೆ.
ಅದೇ ರೀತಿ ಸುಮಾರು 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಇನ್ನೊಂದು ಫಾರ್ಮ್ ನಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶ ನೀಡಿದ್ದು, ಶಿಷ್ಟಾಚಾರದ ನಿಯಮದಂತೆ ಆ ಹಂದಿಗಳನ್ನು ಹೂಳಲು ಸೂಚನೆ ನೀಡಿರುವುದಾಗಿ ವರದಿ ವಿವರಿಸಿದೆ.


ಈ ಪ್ರದೇಶದಲ್ಲಿ ಹಂದಿ ಮಾಂಸದ ವಿತರಣೆ ಮತ್ತು ಮಾರಾಟ, ಇತರ ಸ್ಥಳಗಳಿಗೆ ಸಾಗಿಸುವುದನ್ನು ಮೂರು ತಿಂಗಳವರೆಗೆ ನಿಷೇಧಿಸಲಾಗಿದೆ.

Join Whatsapp
Exit mobile version