ಹಾಸನ: ಮಳೆ ಮತ್ತು ಪ್ರವಾಹದಿಂದ ಸಂತ್ರಸ್ತರಾದ ಜನರಿಗೆ ಸರ್ಕಾರ ಶೀಘ್ರ ಪರಿಹಾರ ನೀಡಬೇಕು ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಆಗ್ರಹಿಸಿದ್ದಾರೆ.
ಪ್ರವಾಹದಿಂದ ಮುಳುಗಡೆಯಾಗಿರುವ ಗ್ರಾಮಗಳ ಸ್ಥಳಾಂತರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಿ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು. ಪ್ರವಾಹದಿಂದ ಕುಸಿದ ಮನೆಗಳ ಪುನರ್ ನಿರ್ಮಾಣಕ್ಕೆ ಹಾಗೂ ಹಾನಿಯಾದ ಮನೆಗಳ ದುರಸ್ತಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮಳೆ ಮತ್ತು ಪ್ರವಾಹದ ನೀರು ಮನೆಗಳಿಗೆ ನುಗ್ಗಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಧವಸಧಾನ್ಯ ನೀರು ಪಾಲಾಗಿದೆ. ಅಂತಹ ಮನೆಗಳ ಜನರಿಗೆ ಕೂಡಲೇ ಪಡಿತರ ವಿತರಣೆ ಮಾಡಬೇಕು. ಬದುಕು ಸಾಗಿಸಲು ರಸ್ತೆ ಬದಿಯಲ್ಲಿ ಜನರು ಇಟ್ಟುಕೊಂಡಿದ್ದ ಅಂಗಡಿಗಳು ಪ್ರವಾಹಕ್ಕೆ ಹಾನಿಯಾಗಿವೆ. ಕೃಷಿ, ತೋಟಗಾರಿಕೆ ಬೆಳೆ ಅಪಾರ ಹಾನಿಯಾಗಿದೆ.
ಲೋಕೋಪಯೋಗಿ, ಪಂಚಾಯತ್ ರಾಜ್, ನೀರಾವರಿ, ಜಲಸಂಪನ್ಮೂಲ, ಶಿಕ್ಷಣ, ಆರೋಗ್ಯ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಮೂಲಸೌಲಭ್ಯಗಳು ಹಾನಿಯಾಗಿವೆ. ತಕ್ಷಣ ದುರಸ್ತಿ ಕೆಲಸಕ್ಕೆ ಅನುದಾನ ಬಿಡುಗಡೆ ಮಾಡಬೇಕು. ಮುಂದೆ ಪ್ರವಾಹ ಬಂದರೂ ಹಾನಿಯಾಗದ ರೀತಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು.
ಪ್ರವಾಹದಿಂದ ಕುಡಿಯುವ ನೀರು ಕಲುಷಿತಗೊಂಡಿದೆ. ಜನರಿಗೆ ಶುದ್ಧ ನೀರು ಒದಗಿಸಬೇಕು. ಪ್ರವಾಹಪೀಡಿತ ಗ್ರಾಮಗಳಲ್ಲಿ ಸಾಂಕ್ರಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು.
ರಾಜ್ಯದಾದ್ಯಂತ ವಿಪರೀತ ಮಳೆ ಸುರಿಯುತ್ತಿದೆ, ಪಶ್ಚಿಮ ಘಟ್ಟದಲ್ಲಿ ಹೆಚ್ಚಿನ ಮಳೆ ಸುರಿಯುತ್ತಿದ್ದು ಎಲ್ಲಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ, ತಗ್ಗು ಪ್ರದೇಶಗಳು ಜಲಾವೃತವಾಗಿ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ, ನೆರೆಯ ರಾಜ್ಯದಲ್ಲಿ ಭೂ ಕುಸಿತದಿಂದಾಗಿ ನೂರಾರು ಮಂದಿ ನಾಗರಿಕರು ಜೀವ ಕಳೆದುಕೊಂಡಿದ್ದಾರೆ, ರಾಜ್ಯದಲ್ಲಿ ಮಳೆ ಇದೇ ರೀತಿ ಮುಂದುವರೆದರೆ ಪ್ರವಾಹ ಸೇರಿದಂತೆ ಇತರ ಅಪಾಯಗಳು ಸಂಭವಿಸುವ ಸಾಧ್ಯತೆ ಇದೆ.
ಇಂತಹ ಸಂದರ್ಭದಲ್ಲಿ SDPI ಪಕ್ಷದ ಎಲ್ಲಾ ಸ್ತರದ ನಾಯಕರು, ಸ್ಥಳೀಯ ಜನಪ್ರತಿನಿದಿಗಳು, ಕಾರ್ಯಕರ್ತರು, ಸಂತ್ರಸ್ತರ ಸಹಾಯಕ್ಕೆ ಧಾವಿಸುವ ಸಂದರ್ಭದಲ್ಲಿ ಮುಂಜಾಗ್ರತ ಕ್ರಮ ವಹಿಸಿಕೊಂಡು ಹಾನಿಗೊಳಗಾದ ಪ್ರದೇಶಗಳಿಗೆ ಧಾವಿಸಿ ಅವರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಬೇಕು, ಸ್ಥಳೀಯ ಆಡಳಿತ ಮತ್ತು ಇಲಾಖೆಯ ಅಧಿಕಾರಿಯೊಂದಿಗೆ ನಿರಂತರ ಸಂಪರ್ಕ ಹೊಂದಿ ಸರಕಾರದ ವತಿಯಿಂದ ಸಂತ್ರಸ್ತರಿಗೆ ದೊರೆಕಬೇಕಾದ ಗರಿಷ್ಟ ಪ್ರಮಾಣದ ಪರಿಹಾರಗಳನ್ನು ದೊರೆಕಿಸಬೇಕು, ಮನೆ ಮಠ ಕಳೆದುಕೊಂಡು ನಿರಾಶ್ರಿತರಾದವರಿಗೆ ಸೂಕ್ತ ಆಶ್ರಯ ಕಲ್ಪಿಸಲು ಅಧಿಕಾರಿಗಳು ಮತ್ತು ಸ್ಥಳೀಯ ಸಂಘಸಂಸ್ಥೆಗಳು ಮತ್ತು ದಾನಿಗಳ ನೆರವನ್ನು ಪಡೆದು ಕಾರ್ಯೋನ್ಮುಖರಾಗಬೇಕೆಂದು ಕರೆ ನೀಡಿದರು.
ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಸಿದ್ದಿಕ್ ಆನೆಮಹಲ್ ಇತ್ತೀಚಿಗೆ ಕಳೆದ ಒಂದು ತಿಂಗಳಿನಿಂದ ಸುರಿಯುತ್ತಿರುವ ದಾರಕಾರ ಮಳೆಯಿಂದಾಗಿ ಹಾಸನ ನಗರ ಪ್ರದೇಶಗಳ ಬಡಾವನಣೆಗಳಲ್ಲಿ ರಸ್ತೆಗಳು ತುಂಬಾ ಹದಗೆಟ್ಟಿದ್ದು ರಸ್ತೆಗಳಲ್ಲಿ ತುಂಬಾ ಗುಂಡಿಗಳು, ಗುಂಡಿಗಳಲ್ಲಿ ತುಂಬಾ ನೀರು, ಪ್ರತಿನಿತ್ಯ ವಾಹನ ಸವಾರರು, ಶಾಲಾ – ಕಾಲೇಜು ಮಕ್ಕಳು, ಪಾದಾಚಾರಿಗಳ ಪರದಾಟ. ದ್ವಿಚಕ್ರ ವಾಹನ ಸವಾರರು, ಆಟೋ ಚಾಲಕರು ಪ್ರತಿನಿತ್ಯ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದು ಜಿಲ್ಲಾಡಳಿತ ಮತ್ತು ಜನಪ್ರತಿನಿದಿನಗಳು ಎಚ್ಚೆತ್ತು ಕೊಳ್ಳಬೇಕೆಂದು ಎಸ್ ಡಿ ಪಿ ಐ ಜಿಲ್ಲಾಧ್ಯಕ್ಷರು ಅಗ್ರಹಿಸಿದ್ದಾರೆ
ಈ ಸಂದರ್ಭದಲ್ಲಿ ಪ್ರಧಾನಕಾರ್ಯದರ್ಶಿ ಫರೀದ್, ಜಿಲ್ಲಾ ಸಮಿತಿ ಸದಸ್ಯರಾದ ಫೈರೋಜ್ ಪಾಶ ಹಾಸನ ಅಸೆಂಬ್ಲಿ ಅಧ್ಯಕ್ಷರಾದ ಶಜಿಲ್, ಮುಬಾರಕ್ ಸಲೀಮ್,ವಿಮ್ ಅಧ್ಯಕ್ಷೆ ಅಫ್ರೋಜ್ ಬೇಗಂ ಕಾರ್ಯದರ್ಶಿ ಸಾಹಿರ ಬಾನು ಅರಸೀಕೆರೆಯ ಸದ್ದಾಂ, ಇಮ್ರಾನ್, ಮುಬಾರಕ್, ಈತರರು ಉಪಸ್ಥಿತರಿದ್ದರು.