Home ಟಾಪ್ ಸುದ್ದಿಗಳು ಬೆಳಗಾವಿ ಬೆನ್ನಲ್ಲೇ ರಾಯಚೂರಿನಲ್ಲೂ ಗೋರಕ್ಷಣೆಗೆ ಹೋಗಿದ್ದ ಸಂಘ ಪರಿವಾರದ ಕಾರ್ಯಕರ್ತರ ಮೇಲೆ ‌ಹಲ್ಲೆ

ಬೆಳಗಾವಿ ಬೆನ್ನಲ್ಲೇ ರಾಯಚೂರಿನಲ್ಲೂ ಗೋರಕ್ಷಣೆಗೆ ಹೋಗಿದ್ದ ಸಂಘ ಪರಿವಾರದ ಕಾರ್ಯಕರ್ತರ ಮೇಲೆ ‌ಹಲ್ಲೆ

0

ರಾಯಚೂರು: ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಥಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಈ ಪ್ರಕರಣ ನಡೆದ 24 ಗಂಟೆಗಳಲ್ಲೇ ಮತ್ತೊಂದು ಇದೇ ರೀತಿಯ ಘಟನೆ ರಾಯಚೂರಿನಲ್ಲಿ ನಡೆದಿದೆ. ಗೋ ರಕ್ಷಣೆಗೆ ಹೋಗಿದ್ದ ಸಂಘಪರಿವಾರದ ಕಾರ್ಯಕರ್ತರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿರುವ ಹಲ್ಲೆ ಆರೋಪ ಕೇಳಿಬಂದಿದೆ.

ರಾಯಚೂರು ಜಿಲ್ಲೆ ಸಿಂಧನೂರು ನಗರದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಗಾಯಾಳುಗಳು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮನೋಹರ್ ಹಿರೇಮಠ, ಶಿವರಾಜ್ ಎಸ್ ಆರ್ ಕೆ, ನಾಗೇಶ್ ಪವಾರ್, ವೀರಭದ್ರ, ಅನಿಲ್ ಕುಮಾರ್ ಗೊರಬಾಳ, ವೀರೇಶ್ ನಾಯಕ. ಹನುಮೇಶ್ ಎನ್ನುವರು ಗಾಯಗೊಂಡಿದ್ದು, ಸದ್ಯ ಸಿಂಧನೂರು ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ವಿಚಾರ ತಿಳಿದು ಆಸ್ಪತ್ರೆಗೆ ಸಂಘ ಪರಿವಾರದ ಮುಖಂಡರುಗಳು ಭೇಟಿ ನೀಡಿ ಘಟನೆ ಬಗ್ಗೆ ವಿಚಾರಿಸಿದ್ದು, ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version