ದೆಹಲಿ ಬಳಿಕ ಅಹಮದಾಬಾದ್ ನ ಶಾಲೆಗಳಿಗೆ ಬಾಂಬ್ ಬೆದರಿಕೆ

Prasthutha|

ದೆಹಲಿ ಬಳಿಕ ಅಹಮದಾಬಾದ್ ನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.

- Advertisement -

ಕಳೆದ ಎರಡು ದಿನಗಳ ಹಿಂದೆ ದೆಹಲಿಯ ಸುಮಾರು 100ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಇ-ಮೇಲ್ ಮೂಲಕ ಬಂದಿತ್ತು.

ಪ್ರಾಥಮಿಕ ವರದಿಗಳ ಪ್ರಕಾರ, ಗುಜರಾತ್ನ ದೊಡ್ಡ ನಗರಗಳಲ್ಲಿ ಕನಿಷ್ಠ ಮೂರು ಶಾಲೆಗಳಿಗೆ ಇಮೇಲ್ಗಳ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ ಎನ್ನಲಾಗಿದೆ.

- Advertisement -

ಬಾಂಬ್ ಬೆದರಿಕೆ ಇ–ಮೇಲ್ ಬಂದಿರುವ ಶಾಲೆಗಳಿಗೆ ಪೊಲೀಸರು, ಬಾಂಬ್ ಪತ್ತೆ ಮತ್ತು ಬಾಂಬ್ ನಿಷ್ಕ್ರಿಯ ದಳದ (ಬಿಡಿಡಿಎಸ್) ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Join Whatsapp