Home ಟಾಪ್ ಸುದ್ದಿಗಳು ದೆಹಲಿ ಬಳಿಕ ಅಹಮದಾಬಾದ್ ನ ಶಾಲೆಗಳಿಗೆ ಬಾಂಬ್ ಬೆದರಿಕೆ

ದೆಹಲಿ ಬಳಿಕ ಅಹಮದಾಬಾದ್ ನ ಶಾಲೆಗಳಿಗೆ ಬಾಂಬ್ ಬೆದರಿಕೆ

ದೆಹಲಿ ಬಳಿಕ ಅಹಮದಾಬಾದ್ ನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.

ಕಳೆದ ಎರಡು ದಿನಗಳ ಹಿಂದೆ ದೆಹಲಿಯ ಸುಮಾರು 100ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಇ-ಮೇಲ್ ಮೂಲಕ ಬಂದಿತ್ತು.

ಪ್ರಾಥಮಿಕ ವರದಿಗಳ ಪ್ರಕಾರ, ಗುಜರಾತ್ನ ದೊಡ್ಡ ನಗರಗಳಲ್ಲಿ ಕನಿಷ್ಠ ಮೂರು ಶಾಲೆಗಳಿಗೆ ಇಮೇಲ್ಗಳ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ ಎನ್ನಲಾಗಿದೆ.

ಬಾಂಬ್ ಬೆದರಿಕೆ ಇ–ಮೇಲ್ ಬಂದಿರುವ ಶಾಲೆಗಳಿಗೆ ಪೊಲೀಸರು, ಬಾಂಬ್ ಪತ್ತೆ ಮತ್ತು ಬಾಂಬ್ ನಿಷ್ಕ್ರಿಯ ದಳದ (ಬಿಡಿಡಿಎಸ್) ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Join Whatsapp
Exit mobile version