ಗೃಹಬಳಕೆಯ ಬೆನ್ನಲ್ಲೇ ವಾಣಿಜ್ಯ LPG ಸಿಲಿಂಡರ್ ಬೆಲೆ 158 ರೂ. ಇಳಿಕೆ

Prasthutha|

ನವದೆಹಲಿ: ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಗೆ 200 ರೂ. ಸಬ್ಸಿಡಿ ಘೋಷಣೆ ಮಾಡಿದ ಬೆನ್ನಲ್ಲೇ ಈಗ ವಾಣಿಜ್ಯ ಬಳಕೆಯ ಸಿಲಿಂಡರ್ ದರ ಕಡಿತಗೊಂಡಿದೆ.

- Advertisement -


ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು 19-ಕೆಜಿ ವಾಣಿಜ್ಯ ಎಲ್ ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು 158 ರೂ. ಕಡಿತಗೊಳಿಸಿವೆ. ಹೊಸ ಬೆಲೆಗಳು ಇಂದಿನಿಂದಲೇ ಜಾರಿಗೆ ಬರಲಿವೆ.

ವಾಣಿಜ್ಯ ಮತ್ತು ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ ಪರಿಷ್ಕರಣೆಗಳು ಪ್ರತಿ ತಿಂಗಳ ಮೊದಲ ದಿನದಂದು ನಡೆಯುತ್ತವೆ.