ಗುಲಾಂ ನಬಿ ಆಝಾದ್ ಬಳಿಕ ಮತ್ತೋರ್ವ ಹಿರಿಯ ಕಾಂಗ್ರೆಸ್ ನಾಯಕನ ರಾಜೀನಾಮೆ

Prasthutha|

ನವದೆಹಲಿ: ಗುಲಾಂ‌ನಬಿ ಆಝಾದ್ ರಾಜೀನಾಮೆ ಬೆನ್ನಲ್ಲೇ ಹಿಮಾಚಲ ಪ್ರದೇಶ ಕಾಂಗ್ರೆಸ್ ‘ಚಾಲನಾ ಸಮಿತಿ’ಯ ಮುಖ್ಯಸ್ಥ ಆನಂದ್ ಶರ್ಮಾ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ನಡುವೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಆನಂದ್ ಶರ್ಮಾ ರಾಜೀನಾಮೆ ಪತ್ರ ಬರೆದಿದ್ದಾರೆ. ಚುನಾವಣೆಗೂ ಮುನ್ನ ಪಕ್ಷದ ತೀರ್ಮಾನದಿಂದ ಹೊರಗುಳಿಯುವುದಾಗಿ ಅವರು ಪತ್ರದಲ್ಲಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ನಾನು ಆಜೀವ ಕಾಂಗ್ರೆಸ್ಸಿಗನಾಗಿದ್ದೇನೆ ಮತ್ತು ನನ್ನ ನಂಬಿಕೆಗಳಲ್ಲಿ ದೃಢವಾಗಿರುತ್ತೇನೆ ಎಂದು ಪುನರುಚ್ಚರಿಸುತ್ತಿದ್ದೇನೆ… ನಿರಂತರವಾದ ಹೊರಗಿಡುವಿಕೆ ಮತ್ತು ಅವಮಾನಗಳನ್ನು ಗಮನಿಸಿದರೆ, ಸ್ವಾಭಿಮಾನಿ ವ್ಯಕ್ತಿಯಾಗಿ ನನಗೆ ಯಾವುದೇ ಇತರ ಆಯ್ಕೆಯಿಲ್ಲ’ ಎಂದು ಅವರು ತನ್ನ ಟ್ವಿಟರ್‌ ಖಾತೆಯಲ್ಲಿ ಬರೆದಿದ್ದಾರೆ.

- Advertisement -

ಚುನಾವಣೆಯ ಸಮಾಲೋಚನೆ ಪ್ರಕ್ರಿಯೆಯಲ್ಲಿ ತನ್ನನ್ನು ಕಡೆಗಣಿಸಲಾಗಿದೆ ಎಂದು ಶರ್ಮಾ ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ‌ ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೂ ರಾಜ್ಯದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪ್ರಚಾರ ಸಮಿತಿ ಮತ್ತು ರಾಜಕೀಯ ವ್ಯವಹಾರಗಳ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಗುಲಾಂ ನಬಿ ಆಝಾದ್ ರಾಜೀನಾಮೆ ನೀಡಿದ್ದರು.

Join Whatsapp