Home ಟಾಪ್ ಸುದ್ದಿಗಳು ಕರ್ನಾಟಕದಾದ್ಯಂತ ಶಾಲಾ ತರಗತಿಗಳಲ್ಲಿ ಭಗವದ್ಗೀತೆ ಬೋಧನೆಗೆ ಚಿಂತನೆ: ಸಚಿವ ನಾಗೇಶ್

ಕರ್ನಾಟಕದಾದ್ಯಂತ ಶಾಲಾ ತರಗತಿಗಳಲ್ಲಿ ಭಗವದ್ಗೀತೆ ಬೋಧನೆಗೆ ಚಿಂತನೆ: ಸಚಿವ ನಾಗೇಶ್

ಬೆಂಗಳೂರು: ಕರ್ನಾಟಕದಾದ್ಯಂತ ಶಾಲಾ ತರಗತಿಗಳಲ್ಲಿ ಪಾಠ್ಯದ ಜೊತೆ ಭಗವದ್ಗೀತೆಯನ್ನು ಬೋಧಿಸುವ ಬಗ್ಗೆ ಆದೇಶ ಹೊರಡಿಸಲು ಚಿಂತನೆ ನಡೆಸಿದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರ ಈ ಆದೇಶ ಹೊರಡಿಸದಲ್ಲಿ ಎಲ್ಲಾ ಶಾಲೆಗಳ ಪಾಠ್ಯದ ಜೊತೆಗೆ ಭಗವದ್ಗೀತೆ ಬೋಧನೆಯನ್ನು ಕಡ್ಡಾಯಗೊಳಿಸಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಾದ್ಯಂತ ಶಾಲಾ ತರಗತಿಗಳಲ್ಲಿ ಪಠ್ಯಕ್ರಮದ ಜತೆಗೆ ಭಗವದ್ಗೀತೆಯನ್ನು ಬೋಧಿಸುವ ಕುರಿತು ಆದೇಶ ಹೊರಡಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.

ಮಾತ್ರವಲ್ಲ ಪ್ರಸಕ್ತ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಪಠ್ಯ ಪುಸ್ತಕಗಳ ಸಮಿತಿ ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

ಈ ಪ್ರಸ್ತಾವನೆಯು ಆರಂಭಿಕ ಹಂತದಲ್ಲಿದೆ ಮತ್ತು 20222 – 23ನೇ ಶೈಕ್ಷಣಿಕ ಸಾಲಿನಲ್ಲಿ ಅನುಷ್ಠಾನಕ್ಕೆ ತರುವುದಿಲ್ಲ ಎಂದು ಸಚಿವ ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಈ ಮಧ್ಯೆ ಗುಜರಾತ್ ನಲ್ಲಿ 2022 0 23 ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ 6 ರಿಂದ 12ನೇ ತರಗತಿವರೆಗೆ ಭಗವದ್ಗೀತೆಯನ್ನು ಪಠ್ಯದ ಜೊತೆ ಬೋಧಿಸಲಾಗುವುದೆಂದು ಸರ್ಕಾರ ಘೋಷಿಸಿತ್ತು.

Join Whatsapp
Exit mobile version