Home ಟಾಪ್ ಸುದ್ದಿಗಳು ಜೋಶಿಮಠ ಘಟನೆ ಬೆನ್ನಲ್ಲೇ, ಉತ್ತರ ಪ್ರದೇಶದ ಹಲವು ಮನೆಗಳ ಗೋಡೆಗಳಲ್ಲಿ ಬಿರುಕು: ಜನರಲ್ಲಿ ಆತಂಕ

ಜೋಶಿಮಠ ಘಟನೆ ಬೆನ್ನಲ್ಲೇ, ಉತ್ತರ ಪ್ರದೇಶದ ಹಲವು ಮನೆಗಳ ಗೋಡೆಗಳಲ್ಲಿ ಬಿರುಕು: ಜನರಲ್ಲಿ ಆತಂಕ

ಅಲೀಗಢ: ಉತ್ತರಾಖಂಡದಲ್ಲಿ ಭಾರಿ ಭೂ ಕುಸಿತದ ಪ್ರಕರಣ ವರದಿಯಾದ ಬೆನ್ನಲ್ಲೇ ಇದೀಗ ಉತ್ತರ ಪ್ರದೇಶದ ಅಲೀಗಢ ಪ್ರದೇಶದ ಹಲವು ಮನೆಗಳ ಗೋಡೆಗಳಲ್ಲಿ ಬಿರುಕು ಕಂಡು ಬಂದಿದೆ.


ಬಿರುಕು ಕಂಡ ಹಿನ್ನೆಲೆಯಲ್ಲಿ ಜನರು ಆತಂಕ್ಕೀಡಾಗಿದ್ದಾರೆ.


ಕಳೆದ ಕೆಲವು ದಿನಗಳಿಂದ ನಮ್ಮ ಪ್ರದೇಶದ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದು ನಮಗೆ ಭಯ ಉಂಟು ಮಾಡಿದೆ. ಈ ಬಗ್ಗೆ ನಗರಸಭೆಯ ಅಧಿಕಾರಿಗಳಿಗೆ ದೂರು ನೀಡಿದರೆ, ಭರವಸೆ ನೀಡುತ್ತಾರೆಯೇ ಹೊರತು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಮನೆ ಕುಸಿಯುವ ಆತಂಕದಲ್ಲಿ ನಾವಿದ್ದೇವೆ ಎಂದು ಸ್ಥಳೀಯರೊಬ್ಬರು ತಮ್ಮ ಸಂಕಷ್ಟ ತೋಡಿಕೊಂಡಿದ್ದಾರೆ.


ಸ್ಮಾರ್ಟ್ ಸಿಟಿ ಯೋಜನೆಯಡಿ ಇಲ್ಲಿ ಪೈಪ್ ಲೈನ್’ಗಳನ್ನು ಹಾಕಲಾಗಿದ್ದು, ಅವುಗಳು ಈಗ ಸೋರುತ್ತಿವೆ. ಹೀಗಾಗಿ ಮನೆಯ ಗೋಡೆಗಳು ಬಿರುಕು ಬಿಡುತ್ತಿವೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

Join Whatsapp
Exit mobile version