ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಸ್ಥಳೀಯ ಸಂಘ ಸಂಸ್ಥೆಗಳಿಗೆ ಚುನಾವಣೆ: ಸಿದ್ದರಾಮಯ್ಯ

Prasthutha|

ಮೈಸೂರು: ಲೋಕಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ನಂತರ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಗಳಿಗೆ ಚುನಾವಣೆ ನಡೆಸಲಾಗುವುದು ಮತ್ತು ಡಿಲಿಮಿಟೇಶನ್ ಪ್ರಕ್ರಿಯೆ ಮುಗಿದ ಬಳಿಕ ಬೃಹತ್ ಬೆಂಗಳೂರು ಮಹಾನಹರ ಪಾಲಿಕೆಗೂ ಚುನಾವಣೆಗಳನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ಯತೀಂದ್ರ ಸಿದ್ದರಾಮಯ್ಯರನ್ನು ವಿಧಾನ ಪರಿಷತ್ ಸದಸ್ಯ ಮಾಡುವ ಬಗ್ಗೆ ಹಬ್ಬಿರುವ ವದಂತಿಗಳಿಗೆ ಸ್ಪಷ್ಟನೆ ನೀಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯತೀಂದ್ರ ತಮಗಾಗಿ ವರುಣ ಕ್ಷೇತ್ರ ಬಿಟ್ಟುಕೊಟ್ಟಾಗಲೇ ಪಕ್ಷದ ಹೈಕಮಾಂಡ್ ಅವರನ್ನು ವಿಧಾನ ಪರಿಷತ್ ಸದಸ್ಯನಾಗಿ ಮಾಡುವ ಭರವಸೆ ನೀಡಿತ್ತು, ಈಗಲೂ ಅದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದರು.

Join Whatsapp