Home ಟಾಪ್ ಸುದ್ದಿಗಳು ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದ ಭವಿಷ್ಯ ಏನು ಬೇಕಾದರೂ ಆಗಬಹುದು: ಕುಮಾರಸ್ವಾಮಿ

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದ ಭವಿಷ್ಯ ಏನು ಬೇಕಾದರೂ ಆಗಬಹುದು: ಕುಮಾರಸ್ವಾಮಿ

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದ ಭವಿಷ್ಯ ಏನು ಬೇಕಾದರೂ ಆಗಬಹುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.


ಜೆಡಿಎಸ್ ಆತ್ಮಾವಲೋಕನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಸರ್ಕಾರದಲ್ಲಿ ವಿಶ್ವಾಸದ ಕೊರತೆ ಇದೆ. ಹೀಗಾಗಿ ಲೋಕಸಭಾ ಚುನಾವಣೆ ಬಳಿಕ ಸರ್ಕಾರದಲ್ಲಿ ಏನು ಬೇಕಾದರೂ ಆಗಬಹುದು’ ಎಂದರು.


ಅಧಿಕಾರಕ್ಕೆ ಬಂದ ತಕ್ಷಣ ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಎಲ್ಲರಿಗೂ ಉಚಿತ ಎಂದು ಮುಖ್ಯಮಂತ್ರಿಯವರು ಚುನಾವಣೆಯಲ್ಲಿ ಭಾಷಣ ಮಾಡುತ್ತಿದ್ದರು. ಈಗ ಸುಳ್ಳು ಹೇಳಿ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ. ಈಗ ಹೇಗೆ ಕೊಡುತ್ತಾರೆ ನೋಡೋಣ ಎಂದು ಸವಾಲು ಹಾಕಿದರು.

Join Whatsapp
Exit mobile version