ಲಖನೌ: ಹರಿದ್ವಾರದಲ್ಲಿ ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ್ದ ಧಾರ್ಮಿಕ ಕಾರ್ಯಕ್ರಮವೊಂದರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ಶಸ್ತ್ರಾಸ್ತ್ರಗಳ ಮೂಲಕ ಹಿಂಸಾಚಾರ ನಡೆಸಬೇಕೆಂದು ಹಿಂದೂಗಳಿಗೆ ಕರೆ ನೀಡುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲಾಗುತ್ತಿದ್ದಂತೆಯೇ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ಪ್ರತಿಭಟನೆಗಳು ತೀವ್ರಗೊಂಡಾಗ ಕೊನೆಗೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಕಾರ್ಯಕ್ರಮವು ಡಿಸೆಂಬರ್ 17 ರಿಂದ 20 ರವರೆಗೆ ನಡೆದಿತ್ತು. ಆದರೆ ಘಟನೆಯ ಬಗ್ಗೆ ಪ್ರಕರಣ ದಾಖಲಿಸಲು ಪೊಲೀಸರು ಸಿದ್ಧರಿರಲಿಲ್ಲ.
ಆಕ್ರೋಶಗಳು ತೀವ್ರವಾಗುತ್ತಿದ್ದಂತೆಯೇ ಘಟನೆ ನಡೆದು ನಾಲ್ಕು ದಿನಗಳ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಯಾವುದೇ ದೂರು ಬರದ ಕಾರಣ FIR ದಾಖಲಿಸಲು ಸಾಧ್ಯವಿಲ್ಲ ಎಂದು ಪೊಲೀಸರು ಆರಂಭದಲ್ಲಿ ಹೇಳಿದ್ದರು. ನಂತರ ಕಾರ್ಯಕರ್ತ ಸಾಕೇತ್ ಗೋಖಲೆ ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿದೆ.