ನವದೆಹಲಿ: ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ನಂತರ ಇದೀಗ ಬಾಲಿವುಡ್ ನಟಿ ಕಾಜೋಲ್ ಅವರ ಡೀಪ್ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
ಕ್ಯಾಮರಾ ಮುಂದೆ ಬಟ್ಟೆ ಬದಲಾಯಿಸುತ್ತಿರುವ ಮಹಿಳೆಯೊಬ್ಬರ ಮುಖಕ್ಕೆ ಕಾಜೋಲ್ ಅವರ ಮುಖವನ್ನು ಎಡಿಟ್ ಮಾಡಲಾಗಿದೆ. ವೈರಲ್ ಆಗಿರುವ ವಿಡಿಯೋವನ್ನು ಫ್ಯಾಕ್ಟ್ ಚೆಕ್ ಮಾಡಿಸಿದ್ದು, ಅಸಲಿ ಮಹಿಳೆಯನ್ನು ಬ್ರಿಟಿಷ್ ಸೋಷಿಯಲ್ ಮೀಡಿಯಾ ಪ್ರಭಾವಿ ರೋಸಿ ಬ್ರೀನ್ ಎಂದು ಗುರುತಿಸಲಾಗಿದೆ. ಸದ್ಯ ಅದೇ ವಿಡಿಯೋಗೆ ಆರ್ಟಿಫಿಶಿಯಲ್ ಇಂಟಲಿಜೆನ್ಸ್ (ಎಐ) ಬಳಸಿ, ರೋಸಿಯ ಮುಖಕ್ಕೆ ಕಾಜೋಲ್ ಅವರ ಮುಖವನ್ನು ಎಡಿಟ್ ಮಾಡಲಾಗಿದೆ.