ಚಿಕ್ಕಮಗಳೂರು: ತಾಯಿಯಿಂದ ದೂರವಾಗಿದ್ದ ಮಗಳು ಬರೋಬ್ಬರಿ 22 ವರ್ಷದ ಬಳಿಕ ತಾಯಿಯ ಮಡಿಲು ಸೇರಿದ ಅಪರೂಪದ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮದಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮದ ಅಂಜಲಿ 9ನೇ ವಯಸ್ಸಲ್ಲಿ ನಾಪತ್ತೆಯಾಗಿದ್ದು, ಕೇರಳದಲ್ಲಿ ಮನೆ ಕೆಲಸ ಮಾಡಿಕೊಂಡು ಅಲ್ಲಿಯೇ ಜೀವನ ನಿರ್ವಹಣೆ ಮಾಡುತ್ತಿದ್ದರು. ಬಳಿಕ ಕೇರಳದ ನೆಲ್ಲಮಣಿಯ ಸಾಜಿ ಎಂಬವರೊಂದಿಗೆ ವಿವಾಹವಾಗಿದ್ದರು.
ಕಳೆದ 3 ವರ್ಷದಿಂದ ಅಂಜಲಿ ಅವರು ಪತಿಯೊಂದಿಗೆ ಸೇರಿ ತಾಯಿಗಾಗಿ ಹುಡುಕಾಟ ನಡೆಸುತ್ತಿದ್ದರು. ಕೊನೆಗೂ ಮೂಡಿಗೆರೆಯ ಮುದ್ರೆ ಮನೆಯಲ್ಲಿ ಅಂಜಲಿ ತಾಯಿ ಪತ್ತೆಯಾಗಿದ್ದಾರೆ.