Home ಟಾಪ್ ಸುದ್ದಿಗಳು ಉಡುಪಿ ನಂತರ ಇದೀಗ ಕುಂದಾಪುರ ಕಾಲೇಜಿನಲ್ಲೂ ಕೇಸರಿ ಶಾಲು ವಿವಾದ

ಉಡುಪಿ ನಂತರ ಇದೀಗ ಕುಂದಾಪುರ ಕಾಲೇಜಿನಲ್ಲೂ ಕೇಸರಿ ಶಾಲು ವಿವಾದ

ಕುಂದಾಪುರ :  ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಉಡುಪಿಯ ಹಿಜಾಬ್ ವಿವಾದ ಹೈಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ಕುಂದಾಪುರದ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಭುಗಿಲೆದ್ದಿದೆ.

ತರಗತಿಯ ಒಳಗೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ ಕಾರಣಕ್ಕೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ.

ಈ ಬಗ್ಗೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹಿಜಾಬ್ ಕುರಿತಾಗಿ ವಿದ್ಯಾರ್ಥಿನಿಯರ ಪೋಷಕರ ಜತೆ ಮಾತುಕತೆ ನಡೆಸಿದ್ದು, ಸಂಧಾನ ವಿಫಲವಾಗಿದೆ.

ವಸ್ತ್ರಸಂಹಿತೆ ಹೊರತಾಗಿ ಬೇರೆ ಬಟ್ಟೆಗಳಿಗೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವರು ಸೂಚನೆ ನೀಡಿದ್ದು, ಈ ಬಗ್ಗೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಭದ್ರಾವತಿ ನ್ಯೂ ಟೌನ್‌ನ ಸರ್.ಎಂ. ವಿಶ್ವೇಶ್ವರಯ್ಯ ಕಾಲೇಜಿನಲ್ಲಿ ಮಂಗಳವಾರ ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು.

Join Whatsapp
Exit mobile version