Home ಟಾಪ್ ಸುದ್ದಿಗಳು ಉತ್ತರಪ್ರದೇಶ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ED ಜಂಟಿ ನಿರ್ದೇಶಕ!

ಉತ್ತರಪ್ರದೇಶ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ED ಜಂಟಿ ನಿರ್ದೇಶಕ!

ಲಖ್ನೋ: ಜಾರಿ ನಿರ್ದೇಶನಾಲಯದ ಜಂಟಿ ನಿರ್ದೇಶಕ ರಾಜೇಶ್ವರ್ ಸಿಂಗ್ ಅವರು ರಾಜಕೀಯ ಪ್ರವೇಶಿಸುವ ಇಂಗಿತವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಸ್ವಯಂ ನಿವೃತ್ತಿಗಾಗಿ ರಾಜೇಶ್ವರ್ ಸಿಂಗ್ ಹಾಕಿದ ಅರ್ಜಿಯನ್ನು ಕೇಂದ್ರ ಹಣಕಾಸು ಸಚಿವಾಲಯ ಅನುಮೋದಿಸಿದ್ದು, ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಶಕ್ತನ್ಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಲಿದ್ದಾರೆ.

ಉತ್ತರ ಪ್ರದೇಶ ಪೊಲೀಸ್ ನಲ್ಲಿ ಎನ್ಕೌಂಟರ್ ಸ್ಪೆಷಲಿಸ್ಟ್ ಆಗಿದ್ದ ರಾಜೇಶ್ವರ್ ಸಿಂಗ್ 2007ರಲ್ಲಿ ಈಡಿ ಸೇರಿದ್ದರು. ರಾಜೇಶ್ವರ್ ಸಿಂಗ್ ಅವರು 2ಜಿ ಸ್ಪೆಕ್ಟ್ರಮ್ ಹಗರಣ, ಸಹಾರಾ ಪ್ರಕರಣ ಮತ್ತು ಐಎನ್‌ಎಕ್ಸ್ ಮೀಡಿಯಾ ಪ್ರಕರಣ ಸೇರಿದಂತೆ ಹಲವು ಹೈ ಪ್ರೊಫೈಲ್ ಪ್ರಕರಣಗಳ ತನಿಖೆಯಲ್ಲಿ ಭಾಗವಹಿಸಿದ್ದರು.

Join Whatsapp
Exit mobile version