ಕಾಂಗ್ರೆಸ್ ಹಾಗೂ ಪಾಕಿಸ್ತಾನ ಎರಡರ ಅಜೆಂಡವೂ ಒಂದೇ: ಅಮಿತ್ ಶಾ

Prasthutha|

ಜಮ್ಮು: ಕಾಂಗ್ರೆಸ್ ಹಾಗೂ ಪಾಕಿಸ್ತಾನ ಎರಡರ ಅಜೆಂವೂ ಒಂದೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

- Advertisement -


ಜಮ್ಮು ಮತ್ತು ಕಾಶ್ಮೀರದಲ್ಲಿ ಶೆಹಬಾಜ್ ಷರೀಫ್ ನೇತೃತ್ವದ ಸಮ್ಮಿಶ್ರ ಸರ್ಕಾರ ಮತ್ತು ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟವು ಹಿಂದಿನ 370 ನೇ ವಿಧಿ ಮತ್ತು ಆರ್ಟಿಕಲ್ 35A ಮರುಸ್ಥಾಪನೆಯ ವಿಷಯದ ಬಗ್ಗೆ ಒಂದೇ ಅಜೆಂಡಾವನ್ನು ಹೊಂದಿವೆ.


ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ಎಂದಿಗೂ ಮರುಸ್ಥಾಪಿಸುವುದಿಲ್ಲ ಎಂದು ಹೇಳಿದರು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವಿದೆ ಎಂಬುದನ್ನು ಕಾಂಗ್ರೆಸ್ ಮತ್ತು ಪಾಕಿಸ್ತಾನ ಮರೆತಿವೆ ಎಂದರು.

- Advertisement -


ವೈಮಾನಿಕ ದಾಳಿ ಮತ್ತು ಸರ್ಜಿಕಲ್ ಸ್ಟ್ರೈಕ್ ಗಳ ಪುರಾವೆ ಕೇಳುವುದು ಅಥವಾ ಭಾರತೀಯ ಸೇನೆಯ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನು ಹೇಳುವುದು, ರಾಹುಲ್ ಗಾಂಧಿಯವರ ಕಾಂಗ್ರೆಸ್ ಪಕ್ಷ ಮತ್ತು ಪಾಕಿಸ್ತಾನದ ರಾಗ ಯಾವಾಗಲೂ ಒಂದೇ ಆಗಿರುತ್ತದೆ ಮತ್ತು ಕಾಂಗ್ರೆಸ್ ಯಾವಾಗಲೂ ದೇಶ ವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸುತ್ತದೆ. ಆದರೆ, ಕಾಶ್ಮೀರದಲ್ಲಿ 370ನೇ ವಿಧಿಯಾಗಲೀ ಅಥವಾ ಭಯೋತ್ಪಾದನೆಯಾಗಲೀ ಮರಳಲು ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ಮತ್ತು ಪಾಕಿಸ್ತಾನ ಮರೆತಿವೆ ಎಂದು ಹೇಳಿದ್ದಾರೆ.



Join Whatsapp