Home ಟಾಪ್ ಸುದ್ದಿಗಳು ಅಗ್ನಿಪಥ್ : ಹಿಂಸಾತ್ಮಕ ಪ್ರತಿಭಟನೆಗಳ ತನಿಖೆ ನಡೆಸಲು ಎಸ್ ಐಟಿ ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್...

ಅಗ್ನಿಪಥ್ : ಹಿಂಸಾತ್ಮಕ ಪ್ರತಿಭಟನೆಗಳ ತನಿಖೆ ನಡೆಸಲು ಎಸ್ ಐಟಿ ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ

ನವದೆಹಲಿ: ಕೇಂದ್ರ ಸರ್ಕಾರ ಆರಂಭಿಸಿರುವ ಅಗ್ನಿಪಥ್ ಯೋಜನೆಯ ವಿರುದ್ಧ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಯ  ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್ ಐಟಿ) ರಚಿಸಲು ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ರೈಲ್ವೆ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗೆ ಆಗಿರುವ ಹಾನಿಯ ಬಗ್ಗೆಯೂ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

“ಅಗ್ನಿಪಥ್” ಯೋಜನೆ ಮತ್ತು ರಾಷ್ಟ್ರೀಯ ಭದ್ರತೆ ಮತ್ತು ನಮ್ಮ ದೇಶದ ಸೇನೆಯ ಮೇಲೆ ಅದರ ಪರಿಣಾಮವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ವಕೀಲ ವಿಶಾಲ್ ತಿವಾರಿ ಅವರು ಈ ಅರ್ಜಿಯನ್ನು ಸಲ್ಲಿಸಿದ್ದು, ಕೇಂದ್ರವು ತನ್ನ ರಕ್ಷಣಾ ಸಚಿವಾಲಯದ ಮೂಲಕ ಪ್ರಾರಂಭಿಸಿದ ಅಗ್ನಿಪಥ್ ಯೋಜನೆಯ ಪರಿಣಾಮವಾಗಿ ದೇಶದಲ್ಲಿ ಉಂಟಾದ ವಿನಾಶಕಾರಿ ಸ್ಥಿತಿಯ ಬಗ್ಗೆ ನ್ಯಾಯಾಲಯದ ಗಮನಕ್ಕೆ ತರಲಾಗಿದೆ.

Join Whatsapp
Exit mobile version