ರಾಜ್ಯಕ್ಕೂ ಹಬ್ಬಿದ ‘ಅಗ್ನಿಪಥ್’ ಪ್ರತಿಭಟನೆ: ಧಾರವಾಡದಲ್ಲಿ ಲಾಠಿ ಚಾರ್ಜ್

Prasthutha|

ಧಾರವಾಡ: ಸೇನಾ ನೇಮಕಾತಿ ಯೋಜನೆಯಾದ ಅಗ್ನಿಪಥದ ವಿರುದ್ಧ ಉತ್ತರ ಭಾರತದಲ್ಲಿ ಭುಗಿಲೆದ್ದ ಪ್ರತಿಭಟನೆ ಮತ್ತು ಆಕ್ರೋಶ ರಾಜ್ಯಕ್ಕೂ ಹಬ್ಬಿದ್ದು, ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ ಯುವಕರ ಮೇಲೆ ಪೊಲೀಸರು ಲಾಠಿಪ್ರಹಾರ ನಡೆಸಿ ಚದುರಿಸಿದ್ದಾರೆ.

- Advertisement -

ಬಿಹಾರ, ಪಶ್ಚಿಮ ಬಂಗಾಳ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಳೆದ ಮೂರು ದಿನಗಳಿಂದ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಪೊಲೀಸರಿಗೆ ಸೂಚಿಸಲಾಗಿತ್ತು.

ಶನಿವಾರ ಬೆಳಗ್ಗೆ ಧಾರವಾಡದ ಜಿಲ್ಲಾ ನ್ಯಾಯಾಲಯದ ವೃತ್ತದ ಬಳಿ ಏಕಾಏಕಿ ಜಮಾವಣೆಗೊಂಡ ಯುವಕರ ಗುಂಪು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಗ್ನಿಪಥ ಯೋಜನೆಯ ವಿರುದ್ಧ ಆಕ್ರೋಶ ಹೊರಹಾಕಿದರು.

- Advertisement -

ಯುವಕರ ತಂಡ ಹೆಚ್ಚಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರತಿಭಟನೆಗೆ ಅವಕಾಶ ಇಲ್ಲ, ಎಲ್ಲರೂ ತಮ್ಮ ಮನೆಗಳಿಗೆ ತೆರಳುವಂತೆ ಸೂಚನೆ ನೀಡಿದರು. ಆದರೆ ಪ್ರತಿಭಟನಕಾರರು ಪೊಲೀಸರ ಮಾತಿಗೆ ಕಿವಿಗೊಡದಿದ್ದಾಗ ಪೊಲೀಸರು ಲಘುಲಾಠಿ ಚಾರ್ಜ್ ಮಾಡಿ ಪ್ರತಿಭಟನಕಾರರನ್ನು ಚದುರಿಸಿದರು.

ಕೆಲವು ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದರು.



Join Whatsapp