ಚೆನ್ನೈ: ರಕ್ಷಣಾ ಸೇವೆಗಳಲ್ಲಿ ನೇಮಕಾತಿಗಾಗಿ ಕೇಂದ್ರದ ‘ಅಗ್ನಿಪಥ್’ ಯೋಜನೆಯ ವಿರುದ್ಧದ ಪ್ರತಿಭಟನೆಯಿಂದಾಗಿ ಚೆನ್ನೈನ ಹಲವಾರು ರೈಲುಗಳನ್ನು ಸಂಪೂರ್ಣವಾಗಿ ಅಥವಾ ಭಾಗಶಃ ರದ್ದುಗೊಳಿಸಲಾಗಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.
ಅದರಂತೆ, ತಿರುವನಂತಪುರಂ- ಸಿಕಂದರಾಬಾದ್ ಶಬರಿ ಎಕ್ಸ್ ಪ್ರೆಸ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, ಮೈಸೂರು-ಧರ್ಭಂಗ ಬಾಗ್ಮತಿ ಎಕ್ಸ್ ಪ್ರೆಸ್, ಎರ್ನಾಕುಲಂ-ಬರೌನಿ ರಪ್ತಿಸಾಗರ್ ಎಕ್ಸ್ ಪ್ರೆಸ್ ಮತ್ತು ಬೆಂಗಳೂರು ದಾನಾಪುರ ಸಂಘಮಿತ್ರ ಎಕ್ಸ್ ಪ್ರೆಸ್ ಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಎಂದು ದಕ್ಷಿಣ ರೈಲ್ವೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.