ಆಗುಂಬೆ ಘಾಟಿಯಲ್ಲಿ ಭೂಕುಸಿತ: ಸಂಚಾರ ಬಂದ್

Prasthutha|

- Advertisement -

ಹೆಬ್ರಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಕಾರಣದಿಂದ ಆಗುಂಬೆ ಘಾಟಿಯ ನಾಲ್ಕನೇ ಸುತ್ತಿನಲ್ಲಿ ಭೂಕುಸಿತವಾಗಿದೆ.

ಭಾರೀ ಪ್ರಮಾಣದ ಮಣ್ಣು ಮತ್ತು ಮರ ರಸ್ತೆಗೆ ಬಿದ್ದ ಕಾರಣ ಸಂಚಾರ ಸ್ಥಗಿತವಾಗಿದೆ.‌

- Advertisement -

ತಡರಾತ್ರಿ ಗುಡ್ಡ ಕುಸಿತದ ಪರಿಣಾಮ ರಾತ್ರಿಯಿಂದಲೇ ವಾಹನ ಸಂಚಾರ ಬಂದ್ ಆಗಿದ್ದು, ಶಿವಮೊಗ್ಗ ಆಗುಂಬೆಯಿಂದ ಉಡುಪಿಗೆ ಬರುವ ವಾಹನಗಳು ಸಿದ್ಧಾಪುರ ಮೂಲಕ ಬರುತ್ತಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಣ್ಣು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.‌

Join Whatsapp