ಎಐಸಿಸಿ ಕೇಂದ್ರ ಚುನಾವಣಾ ಸಮಿತಿ ಮರುರಚನೆ: ಸಚಿವ ಕೆಜೆ ಜಾರ್ಜ್‌ಗೆ ಸ್ಥಾನ

Prasthutha|

ಹೊಸದಿಲ್ಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ 16 ಸದಸ್ಯರನ್ನು ಒಳಗೊಂಡ ಕೇಂದ್ರ ಚುನಾವಣಾ ಸಮಿತಿಯನ್ನು ಮರು ರಚಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಆದೇಶ ಹೊರಡಿಸಿದ್ದಾರೆ.

- Advertisement -

ರಾಜ್ಯ ಮತ್ತು ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಅಂತಿಮ ಆಯ್ಕೆ ಮತ್ತು ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕಾಂಗ್ರೆಸ್ ನೂತನ ಚುನಾವಣಾ ಸಮಿತಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ 16 ಸದಸ್ಯರನ್ನು ಒಳಗೊಂಡಿದೆ.

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ, ಅಂಬಿಕಾ ಸೋನಿ ಮತ್ತು ಕೆಸಿ ವೇಣುಗೋಪಾಲ್ ಅವರನ್ನು ಸಹ ಕೇಂದ್ರ ಚುನಾವಣಾ ಸಮಿತಿಯಲ್ಲಿ ಸೇರಿಸಲಾಗಿದೆ. ಈ ಹಿಂದಿನ ಸಮಿತಿಯಲ್ಲಿ ಒಟ್ಟು 11 ಸದಸ್ಯರಿದ್ದರು. ಆದರೆ ಈ ಭಾರಿ ಮಾತ್ರ 16 ಸದಸ್ಯರಿದ್ದಾರೆ.

- Advertisement -

ಸಂಸದ ಅಧೀರ್ ರಂಜನ್ ಚೌಧರಿ, ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್, ಮಧುಸೂದನ್ ಮಿಸ್ತ್ರಿ, ಎನ್ ಉತ್ತಮ್ ಕುಮಾರ್, ಟಿಎಸ್ ಸಿಂಗ್​ ಡಿಯೋ, ಪ್ರೀತಮ್ ಸಿಂಗ್, ಮೊಹಮ್ಮದ್ ಜಾವೇದ್, ಅಮೀ ಯಾಜ್ನಿಕ್, ಪಿಎಲ್ ಪುನಿಯಾ, ಓಂಕಾ‌ರ್​​ ಮಾರ್ಕಮ್ ಮತ್ತು ರಾಜ್ಯದ ಇಂಧನ ಸಚಿವ ಕೆ.ಜೆ ಜಾರ್ಜ್ ಹೊಸ ಸಮಿತಿಯ ಇತರೆ ಸದಸ್ಯರು.

ಏಳು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯರು ಈ ಹೊಸ ಸಮಿತಿಯ ಭಾಗವಾಗಿದ್ದು, ಉನ್ನತಾಧಿಕಾರ ಸಮಿತಿಯಲ್ಲಿ ಸದಸ್ಯತ್ವ ಕಳೆದುಕೊಂಡಿರುವ ಪಿಎಲ್ ಪುನಿಯಾ ಮತ್ತು ಟಿಎಸ್ ಸಿಂಗ್ ಡಿಯೋ ಅವರಂತಹ ಹಲವಾರು ನಾಯಕರು ಚುನಾವಣಾ ಸಮಿತಿಯಲ್ಲಿ ಆಯ್ಕೆಯಾಗಿದ್ದಾರೆ.

ರಾಜ್ಯ ಪಕ್ಷದ ನಾಯಕತ್ವದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಎನ್​ ಉತ್ತಮ್ ಕುಮಾರ್ ರೆಡ್ಡಿ ಅವರಂತಹ ನಾಯಕರಿಗೆ ಅವಕಾಶ ಕಲ್ಪಿಸಲಾಗಿದೆ. ಆಂಟನಿ ಅವರನ್ನು ಕೇಂದ್ರ ಚುನಾವಣಾ ಸಮಿತಿಯಲ್ಲಿ ಉಳಿಸಿಕೊಂಡಿದ್ದರೂ ರಾಜಕೀಯದಲ್ಲಿ ನಿವೃತ್ತಿಯಲ್ಲಿರುವುದರಿಂದ ಕರ್ನಾಟಕ ರಾಜ್ಯ ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಉನ್ನತ ಅಧಿಕಾರದ ಸಮಿತಿಯಲ್ಲಿ ಏಕೈಕ ಕ್ರಿಶ್ಚಿಯನ್​​​ ನಾಯಕರಾಗಿದ್ದಾರೆ.

Join Whatsapp