Home ಟಾಪ್ ಸುದ್ದಿಗಳು 2022ರ ಸೆಪ್ಟೆಂಬರ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

2022ರ ಸೆಪ್ಟೆಂಬರ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ 2022ರಲ್ಲಿ ಚುನಾವಣೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇಂದು ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ.

ಕಾಂಗ್ರೆಸ್ ನಾಯಕತ್ವದ ಬಗ್ಗೆ ಆಂತರಿಕ ವಲಯದಲ್ಲಿ ಸೃಷ್ಟಿಯಾಗಿರುವ ಗೊಂದಲ ಮತ್ತು ಟೀಕೆ-ಟಿಪ್ಪಣಿಗಳಿಗೆ ಅಧಿನಾಯಕಿ ಸೋನಿಯಾ ಗಾಂಧಿ ಪ್ರತ್ಯುತ್ತರ ನೀಡಿದ್ದಾರೆ. ತಾವು ಪೂರ್ಣಾವಧಿವರೆಗೂ ಕಾಂಗ್ರೆಸ್ ನಾಯಕತ್ವವನ್ನು ವಹಿಸಿಕೊಳ್ಳುವ ಬಗ್ಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

Join Whatsapp
Exit mobile version