ಐದು ಸ್ಥಾನ ಗೆಲ್ಲಿಸಿದರೆ ಏಮ್ಸ್ ಮಂಜೂರು: ಬಿ.ಎಸ್.ಯಡಿಯೂರಪ್ಪ

Prasthutha|

ರಾಯಚೂರು : ರಾಯಚೂರು ಜಿಲ್ಲೆಯ ಏಳು ಸ್ಥಾನಗಳ ಪೈಕಿ ಐದರಲ್ಲಿ ಬಿಜೆಪಿಯನ್ನು ಗೆಲ್ಲಿಸಿದರೆ ಏಮ್ಸ್ ಸ್ಥಾಪಿಸಲು ಸಿಎಂಗೆ ಮನವಿ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ತಾಲೂಕಿನ ಗಿಲ್ಲೇಸುಗೂರು ಗ್ರಾಮದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಯಚೂರು ಜಿಲ್ಲೆಯ ಜನರ ನಿರೀಕ್ಷೆಯಂತೆ ಏಮ್ಸ್ ಬೇಡಿಕೆ ಈಡೇರಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಕಾರಾತ್ಮಕವಾಗಿದ್ದಾರೆ. ಆದರೆ, ಏಳು ಶಾಸಕ ಸ್ಥಾನಗಳ ಪೈಕಿ ಐದರಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಹೇಳಿದರು.
ದೇಶದಲ್ಲಿ ಶೇ 73 ರಷ್ಟು ಜನರು ಪ್ರಧಾನ ನರೇಂದ್ರ ಮೋದಿ ಪರವಾಗಿದ್ದಾರೆ ಎನ್ನುವುದು ಸಮೀಕ್ಷೆಯಿಂದ ಗೊತ್ತಾಗಿದೆ. ರಾಜ್ಯದಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲುವು ನಿಶ್ಚಿತ. ಇದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ ಎಂದರು.
ಈ ಕುರಿತು ಸಹಮತ ಸೂಚಿಸಿದ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಅವರು ಹೇಳಿದ ಮಾತನ್ನು ಅನುಸರಿಸಿದರೆ, ಜಿಲ್ಲೆಗೆ ಏಮ್ಸ್ ಮಂಜೂರು ಮಾಡಿಸುವ ಸಂಬಂಧ ಕೇಂದ್ರ ಸರಕಾರದೊಂದಿಗೆ ಚರ್ಚಿಸುವುದಾಗಿ ಹೇಳಿದರು.



Join Whatsapp