ಹೈದರಾಬಾದ್: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ಸಂಬಂಧಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ಮೃತರನ್ನು ಡಾ. ಮಜಹರುದ್ದೀನ್ ಖಾನ್ ಎಂದು ಗುರುತಿಸಲಾಗಿದೆ. ಹೈದರಾಬಾದ್ನ ಬಂಜಾರಾ ಹಿಲ್ಸ್ನಲ್ಲಿರುವ ತಮ್ಮ ನಿವಾಸದಲ್ಲಿ ಖಾನ್ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುಂಡು ಹಾರಿಸಿಕೊಂಡು ತಲೆಯ ಬಲಭಾಗದಲ್ಲಿ ಗಂಭೀರ ಗಾಯವಾಗಿದ್ದು, ಕುಟುಂಬದ ಸದಸ್ಯರು ತಕ್ಷಣ ಅವರನ್ನು ಜುಬಿಲಿ ಹಿಲ್ಸ್ನಲ್ಲಿರುವ ಅಪೋಲೋ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಹಾಗೂ ಅವರ ಸಹೋದರ ಅಕ್ಬರುದ್ದೀನ್ ಒವೈಸಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಡಾ.ಮಜಹರ್ ಅವರ ಮಗ ಅಸಾದುದ್ದೀನ್ ಓವೈಸಿಯ ಎರಡನೇ ಮಗಳನ್ನು ಮದುವೆಯಾಗಿದ್ದು, ಮೃತರು ಒವೈಸಿ ಆಸ್ಪತ್ರೆಯ ಸರ್ಜನ್ ಆಗಿದ್ದಾರೆ.