ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಐಎಂಐಎಂ

Prasthutha|

ಹೊಸದಿಲ್ಲಿ: ಮುಂಬರುವ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(AIMIM) ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

- Advertisement -

ಎಐಎಂಐಎಂ ಪಕ್ಷದ ಅಧ್ಯಕ್ಷರಾಗಿರುವ ಅಸಾದುದ್ದೀನ್ ಓವೈಸಿ ಅವರು ಮೂರು ಕ್ಷೇತ್ರ ವಿಧಾನ ಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ.

ಬೆಳಗಾವಿ-ಉತ್ತರ ಕ್ಷೇತ್ರಕ್ಕೆ ಲತೀಫ್ ಖಾನ್ ಪಠಾಣ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲಿದ್ದು, ಹುಬ್ಬಳ್ಳಿ – ಧಾರವಾಡ ಪೂರ್ವ ಕ್ಷೇತ್ರಕ್ಕೆ ದುರ್ಗಪ್ಪ ಬಿಜವಾಡ ಅವರನ್ನು ಅಭ್ಯರ್ಥಿಯನ್ನಾಗಿಸಿ ಟಿಕೆಟ್‌ ಕೊಟ್ಟಿದೆ. ಬಸವನ ಬಾಗೇವಾಡಿ ಕ್ಷೇತ್ರದಿಂದ ಅಲ್ಲಾಭಕ್ಷ ಮೆಹಬೂಬ್‌ ಸಾಬ್‌ ಬಿಜಾಪುರ ಅವರು ಸ್ಪರ್ಧಿಸಲಿದ್ದಾರೆ.

- Advertisement -

ಶೀಘ್ರದಲ್ಲಿ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಓವೈಸಿ ತಿಳಿಸಿದ್ದಾರೆ.

Join Whatsapp