ತಮಿಳುನಾಡು ವಿಧಾನಸಭಾ ಚುನಾವಣೆಗೆ ಕಮಲ್ ಹಾಸನ್ ಪಕ್ಷದ ಜೊತೆ ಒವೈಸಿಯ ಎಐಎಂಐಎಂ ಮೈತ್ರಿ ಸಾಧ್ಯತೆ | 25 ಸ್ಥಾನಗಳಲ್ಲಿ ಸ್ಪರ್ಧೆ

Prasthutha|

ಪಾಟ್ನಾ : ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಒವೈಸಿ ಅವರ ಆಲ್ ಇಂಡಿಯಾ ಮಜ್ಲಿಸೆ ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ), ಖ್ಯಾತ ನಟ ಕಮಲ್ ಹಾಸನ್ ಅವರ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯೊಂದು ತಿಳಿಸಿದೆ.

- Advertisement -

2021ರ ಏಪ್ರಿಲ್-ಮೇನಲ್ಲಿ ನಡೆಯಬಹುದಾದ ವಿಧಾನಸಭಾ ಚುನಾವಣೆಯಲ್ಲಿ ಎಐಎಂಐಎಂ ಕನಿಷ್ಠ 25 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಕಮಲ್ ಹಾಸನ್ ಅವರ ಮಕ್ಕಳ್ ನೀದಿ ಮೈಯಾಮ್ ಸೇರಿದಂತೆ ಇತರ ಸಣ್ಣ ಪಕ್ಷಗಳ ಜೊತೆ ಎಐಎಂಐಎಂ ಮೈತ್ರಿ ನಡೆಸುವ ಸಾಧ್ಯತೆಯಿದೆ ಎಂದೂ ವರದಿ ತಿಳಿಸಿದೆ.

ಬಿಹಾರ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ನೀಡಿರುವ ಎಐಎಂಐಎಂ, ದೇಶದ ಇತರ ರಾಜ್ಯಗಳಲ್ಲೂ ತನ್ನ ಅಸ್ತಿತ್ವ ಸ್ಥಾಪನೆಗೆ ಶ್ರಮಿಸುತ್ತಿದೆ.

Join Whatsapp