ಮಗುವಿನ ಮೇಲೆ ಕಾರು ಹತ್ತಿಸಿ ಕೊಲೆ: ವಾಯುಪಡೆ ಅಧಿಕಾರಿಯ ಪುತ್ರ ಸೆರೆ

Prasthutha|

ನವದೆಹಲಿ: ಮಗುವಿನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ್ದ ಆರೋಪದ ಮೇರೆಗೆ ವಾಯುಪಡೆ ಅಧಿಕಾರಿಯೊಬ್ಬರ ಪುತ್ರನನ್ನು ನಗರ ಪೊಲೀಸರು ಬಂಧಿಸಿದ್ದಾರೆ.

- Advertisement -


ಬೈಕ್’ನಲ್ಲಿ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸಾವನ್ನಪ್ಪಿದ್ದ ಸಂಬಂಧಿಸಿದಂತೆ ಭಾರತೀಯ ವಾಯುಪಡೆಯ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಭರತ್ ಮಲಿಕ್ ಅವರ ಪುತ್ರ ಸಮರ್ಕ್ ಮಲಿಕ್ (20)ನನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.


ಮಗುವಿನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಗ್ರೂಪ್ ಕ್ಯಾಪ್ಟನ್ ಮಗನನ್ನು ಬಂಧಿಸಿದ್ದಾರೆ.

- Advertisement -


ಕಳೆದ ಫೆ.26 ರಂದು ಸಂಜೆ 5.20 ಕ್ಕೆ ಆರ್ ಎಂಎಲ್ ಆಸ್ಪತ್ರೆಯಲ್ಲಿ ಮಗು ಕೊನೆಯುಸಿರೆಳೆದಿದ್ದಾಳೆ. ಮಗು ಸಾವನ್ನಪ್ಪಿದ ಬಗ್ಗೆ ಪೊಲೀಸರು ದೂರು ಸ್ವೀಕರಿಸಿದ್ದಾರೆ.


ಭಾರತೀಯ ದಂಡ ಸಂಹಿತೆಯ (ಐಪಿಸಿ) 279/304 ಎ ಸೆಕ್ಷನ್’ಗಳ ಅಡಿಯಲ್ಲಿ ಎಫ್’ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಆರೋಪಿ ಚಾಲಕ ಸಮರ್ಕ್ ಗಾಯಗೊಂಡ ಬಾಲಕಿ ಆಕೆಯ ಕುಟುಂಬದವರನ್ನು ದೆಹಲಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ.

Join Whatsapp