ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ತುರ್ತು ಭೂಸ್ಪರ್ಶ

ಕಣ್ಣೂರು: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ಅಪಾಯವನ್ನರಿತ ಪೈಲಟ್ ತಕ್ಷಣ ವಿಮಾನವನ್ನು ತುರ್ತಾಗಿ ಲ್ಯಾಂಡ್ ಮಾಡಿದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.

ಸುಮಾರು 135 ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದು, ಟೇಕ್ ಆಫ್ ಆದ ಕೂಡಲೇ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ತಕ್ಷಣ ತುರ್ತು ಭೂಸ್ಪರ್ಶ ಮಾಡಲಾಗಿದೆ. ಸದ್ಯ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಏರ್ ಇಂಡಿಯಾದ ಅಧಿಕಾರಿಗಳು ತಿಳಿಸಿದ್ದಾರೆ.