Home ಟಾಪ್ ಸುದ್ದಿಗಳು ಚಿನ್ನ ಸಾಗಾಟ ಮಾಡುತ್ತಿದ್ದ ಏರ್ ಇಂಡಿಯಾ ಸಿಬ್ಬಂದಿ ಬಂಧನ

ಚಿನ್ನ ಸಾಗಾಟ ಮಾಡುತ್ತಿದ್ದ ಏರ್ ಇಂಡಿಯಾ ಸಿಬ್ಬಂದಿ ಬಂಧನ

ಕೊಚ್ಚಿ: ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಏರ್ ಇಂಡಿಯಾ ಸಿಬ್ಬಂದಿಯನ್ನು ಬಂಧಿಸಿದ ಘಟನೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ವಯನಾಡು ಮೂಲದ ಶಫಿ ಎಂದು ತಿಳಿದು ಬಂದಿದ್ದು, ಬಂಧಿತನಿಂದ 1487 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಬಹ್ರೇನ್ ಹಾಗೂ ಕೊಚ್ಚಿ ನಡುವಿನ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ಸಿಬ್ಬಂದಿ ಕೈಗಳಿಗೆ ಚಿನ್ನವನ್ನು ಸುತ್ತಿಕೊಂಡಿರುವ ಮಾಹಿತಿ ಅಧಿಕಾರಿಗಳಿಗೆ ಲಭಿಸಿತ್ತು. ಬಳಿಕ ಆತನನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ಹೇಳಿದೆ.

Join Whatsapp
Exit mobile version