ಹೊಸದಿಲ್ಲಿ: ಫ್ರಾನ್ಸ್ನ ಪ್ರಮುಖ ವಿಮಾನ ತಯಾರಿಕಾ ಕಂಪನಿ ಏರ್ಬಸ್ನಿಂದ ಟಾಟಾ ಸಮೂಹದ ಒಡೆತನದ ಏರ್ ಇಂಡಿಯಾ 250 ವಿಮಾನಗಳನ್ನು ಖರೀದಿಸಲಿದೆ.
ಈ ಕುರಿತ ಒಪ್ಪಂದ ಅಂತಿಮಗೊಂಡಿದ್ದು, ಮಂಗಳವಾರ ಅಧಿಕೃತ ಘೋಷಣೆ ಹೊರಬಿದ್ದಿದೆ. ವಿಶ್ವದ ಅತಿದೊಡ್ಡ ವಿಮಾನ ಖರೀದಿ ಒಪ್ಪಂದ ಎಂದೇ ಇದನ್ನು ಹೇಳಲಾಗುತ್ತಿದೆ.
ಒಟ್ಟಾರೆಯಾಗಿ ಏರ್ ಇಂಡಿಯಾ 470 ವಿಮಾನಗಳನ್ನು ಖರೀದಿಸಲು ಉದ್ದೇಶಿಸಿದ್ದು, ಈ ಪೈಕಿ 220 ವಿಮಾನಗಳನ್ನು ಬೋಯಿಂಗ್ ಕಂಪನಿಯಿಂದ ಖರೀದಿಸಲಿದೆ.
ಈ ಒಪ್ಪಂದವು ಭಾರತ-ಫ್ರಾನ್ಸ್ ನಡುವಣ ಬಾಂಧವ್ಯದಲ್ಲಿ ಮಹತ್ವದ ಮೈಲಿಗಲ್ಲು ಎಂದು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಬಣ್ಣಿಸಿದ್ದಾರೆ.