Home ಟಾಪ್ ಸುದ್ದಿಗಳು ವಾಯುಪಡೆ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಏರ್ ಮಾರ್ಷಲ್ ಎಪಿ ಸಿಂಗ್

ವಾಯುಪಡೆ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಏರ್ ಮಾರ್ಷಲ್ ಎಪಿ ಸಿಂಗ್

ನವದೆಹಲಿ: ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರು ವಾಯುಪಡೆಯ ನೂತನ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.


5,000 ಗಂಟೆಗಳ ಯುದ್ಧ ವಿಮಾನ ಹಾರಾಟದ ಅನುಭವ ಹೊಂದಿರುವ ಅಮರ್ ಪ್ರೀತ್ ಸಿಂಗ್ ಈ ಹಿಂದೆ ವಾಯುಪಡೆಯ ವೈಸ್ ಚೀಫ್ ಆಫ್ ದಿ ಏರ್ ಸ್ಟಾಫ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು (ಸೋಮವಾರ) ಏರ್ ಚೀಫ್ ಮಾರ್ಷಲ್ ವಿ.ಆರ್ ಚೌಧರಿ ನಿವೃತ್ತರಾಗಿದ್ದು, ವಾಯುಪಡೆ ನೂತನ ಮುಖ್ಯಸ್ಥರಾಗಿ ಎಪಿ ಸಿಂಗ್ ಅಧಿಕಾರ ವಹಿಸಿಕೊಂಡಿದ್ದಾರೆ.


ಅಮರ್ ಪ್ರೀತ್ ಸಿಂಗ್ 5,000 ಗಂಟೆಗಳ ಯುದ್ಧ ವಿಮಾನ ಹಾರಾಟದ ಅನುಭವ ಹೊಂದಿದ್ದಾರೆ. ಇತ್ತೀಚೆಗೆ ಐಎಎಫ್ ಆಯೋಜಿಸಿದ್ದ ಬಹುರಾಷ್ಟ್ರೀಯ ಯುದ್ಧ ವಿಮಾನಗಳ ಕಸರತ್ತು `ತರಂಗ್ ಶಕ್ತಿ’ ಆಯೋಜಿಸುವಲ್ಲಿ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು.

ಅಕ್ಟೋಬರ್ 27, 1964 ರಂದು ಜನಿಸಿದ ಏರ್ ಮಾರ್ಷಲ್ ಸಿಂಗ್ ಅವರು ಡಿಸೆಂಬರ್ 1984 ರಲ್ಲಿ ಭಾರತೀಯ ವಾಯುಪಡೆಯ ಫೈಟರ್ ಪೈಲಟ್ ಸ್ಟ್ರೀಮ್ ಗೆ ನಿಯೋಜಿಸಲ್ಪಟ್ಟರು. ಸುಮಾರು 40 ವರ್ಷಗಳ ಕಾಲ ಅವರ ಸುದೀರ್ಘ ಮತ್ತು ವಿಶಿಷ್ಟ ಸೇವೆಯಲ್ಲಿ, ವಿವಿಧ ಕಮಾಂಡ್, ಮತ್ತು ವಿದೇಶಿ ನೇಮಕಾತಿಯಲ್ಲೂ ಸೇವೆ ಸಲ್ಲಿಸಿದ್ದಾರೆ.

Join Whatsapp
Exit mobile version