2ನೇ ವಿಶ್ವಯುದ್ಧದ ಸ್ಮರಣಾರ್ಥ ವೈಮಾನಿಕ ಪ್ರದರ್ಶನ| ಪರಸ್ಪರ ಡಿಕ್ಕಿ ಹೊಡೆದ 2 ವಿಮಾನಗಳು

Prasthutha|

ವಾಷಿಂಗ್ಟನ್‌: ಟೆಕ್ಸಾಸ್ ನಗರದ ಬಳಿ 2ನೇ ವಿಶ್ವಯುದ್ಧದ ಸ್ಮರಣಾರ್ಥ ನಡೆದ ವೈಮಾನಿಕ ಪ್ರದರ್ಶನದಲ್ಲಿ ಎರಡು ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ.  

- Advertisement -

ಈ ಕುರಿತು ಮಾಹಿತಿ ನೀಡಿದ ಅಮೆರಿಕದ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (ಎಫ್‌ಎಎ) ಟೆಕ್ಸಾಸ್ ನಗರದ ಬಳಿ 2ನೇ ವಿಶ್ವಯುದ್ಧದ ಸ್ಮರಣಾರ್ಥ ನಡೆದ ವೈಮಾನಿಕ ಪ್ರದರ್ಶನದಲ್ಲಿ ಬೋಯಿಂಗ್ ಬಿ-17 ಫ್ಲೈಯಿಂಗ್ ಫೋರ್ಟ್ರೆಸ್ ಬಾಂಬರ್ ಮತ್ತು ಬೆಲ್ ಪಿ-63 ಕಿಂಗ್‌ ಕೋಬ್ರಾ ಎಂಬ ಎರಡು ಯುದ್ಧ ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಪ್ರದರ್ಶನದ ವೇಳೆ ಎರಡೂ ಯುದ್ಧ ವಿಮಾನಗಳ ರೆಕ್ಕೆಗಳು ತಾಗಿ ಡಿಕ್ಕಿ ಸಂಭವಿಸಿದೆ.

Join Whatsapp