ರಾಹುಲ್, ಸೋನಿಯಾ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಭೋಪಾಲ್‌ನಲ್ಲಿ ತುರ್ತು ಭೂಸ್ಪರ್ಶ

Prasthutha|

ಹೊಸದಿಲ್ಲಿ:  ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನವನ್ನು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಕೆಟ್ಟ ಹವಾಮಾನದಿಂದಾಗಿ ವಿಮಾನ ಭೂಸ್ಪರ್ಶ ಮಾಡಲಾಗಿದೆ. ವಿರೋಧ ಪಕ್ಷಗಳ ಎರಡು ದಿನಗಳ ಚಿಂತನ-ಮಂಥನ ಅಧಿವೇಶನದಲ್ಲಿ ಭಾಗವಹಿಸಿದ ನಂತರ ತಾಯಿ-ಮಗ ಬೆಂಗಳೂರಿನಿಂದ ದೆಹಲಿಗೆ ಹಿಂತಿರುಗುತ್ತಿದ್ದರು. ದೆಹಲಿಗೆ ತೆರಳುತ್ತಿದ್ದ ಖಾಸಗಿ ಚಾರ್ಟರ್ಡ್ ವಿಮಾನ ತುರ್ತು ಭೂಸ್ಪರ್ಶ ಮಾಡಲೇಬೇಕಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp