ಹೈದರಾಬಾದ್: ವಿಮಾನ ನಿಲ್ದಾಣದಲ್ಲಿ CISF ಸಿಬ್ಬಂದಿಗಳೊಂದಿಗೆ ವಾಗ್ವಾದಕ್ಕೀಳಿದ ಆರೋಪದ ಮೇಲೆ ಮಾಲಿವುಡ್ ನಟ ವಿನಾಯಗನ್ ಅವರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಕೊಚ್ಚಿಯಿಂದ ಗೋವಾಗೆ ಪ್ರಯಾಣಿಸುವಾಗ ಈ ಘಟನೆ ಸಂಭವಿಸಿದ್ದು, ವಿನಾಯಗನ್ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಗೋವಾಗೆ ಸಂಪರ್ಕ ಕಲ್ಪಿಸುವ ವಿಮಾನಕ್ಕಾಗಿ ಕಾಯುತ್ತಿದ್ದಾಗ, ಸಿಐಎಸ್ಎಫ್ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ ಎನ್ನಲಾಗಿದೆ.
ಇದಾದ ಬಳಿಕ ವಾಗ್ವಾದ ದೈಹಿಕ ಹಲ್ಲೆವರೆಗೂ ಮುಂದುವರೆದಿದೆ ಎಂದು ವರದಿಯಾಗಿದೆ.
ಘಟನೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲದಿದ್ರೂ,ವಾಹಿನಿಯೊಂದರ ಜತೆ ಮಾತನಾಡಿರುವ ಅವರು, ಸಿಐಎಸ್ಎಫ್ ಸಿಬ್ಬಂದಿಗಳು ತನ್ನನ್ನು ಕೋಣೆಗೆ ಕರೆದುಕೊಂಡು ಥಳಿಸಿದ್ದಾರೆ. ತಾನು ತಪ್ಪು ಮಾಡಿಲ್ಲ, ನನ್ನನ್ನು ಯಾಕೆ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎನ್ನುವುದು ಗೊತ್ತಿಲ್ಲ. ಏನು ನಡೆದಿದೆ ಎನ್ನುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಅವರು ಹೇಳಿದ್ದಾರೆ.