ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Prasthutha|

ಬೆಳ್ತಂಗಡಿ: ರಾಜ್ಯ ವಿಧಾನಸಭಾ ಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದ್ದು, ದ.ಕ. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಬೆಳಗ್ಗೆ 7ಗಂಟೆಗೆ ಮತದಾನ ಆರಂಭಗೊಂಡಿದೆ. ಮತದಾನ ಆರಂಭವಾಗುತ್ತಿದ್ದಂತೆಯೇ ಮತದಾರರು ಉತ್ಸಾಹದಿಂದ ಮತದಾನ ಮಾಡಲು ಆಗಮಿಸುತ್ತಿದ್ದಾರೆ.

- Advertisement -

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಕುಟುಂಬದೊಂದಿಗೆ ಬಂದು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.