ತೆಲಂಗಾಣ ಹಂಗಾಮಿ ಸ್ಪೀಕರ್ ಆಗಿ ಶಾಸಕ ಅಕ್ಬರುದ್ದೀನ್ ಉವೈಸಿ ಪ್ರಮಾಣ ವಚನ

Prasthutha|

ಹೈದರಾಬಾದ್: ತೆಲಂಗಾಣ ರಾಜ್ಯ ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಉವೈಸಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

- Advertisement -

ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ ಶನಿವಾರ ಆರಂಭವಾಗಿರುವ ರಾಜ್ಯ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ಹಂಗಾಮಿ ಸ್ಪೀಕರ್ ಆಗಿ ಅಕ್ಬರುದ್ದೀನ್ ಉವೈಸಿ ಅವರನ್ನು ನೇಮಕ ಮಾಡಲಾಗಿದ್ದು, ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದ್ದಾರೆ.

ಭಾರತದ ಸಂವಿಧಾನದ 180ನೇ ವಿಧಿಯ ಷರತ್ತು (1) ರ ಮೂಲಕ ನೀಡಲಾದ ಅಧಿಕಾರಗಳನ್ನು ಚಲಾಯಿಸುವ ಮೂಲಕ, ತೆಲಂಗಾಣ ರಾಜ್ಯಪಾಲರು ಅಕ್ಬರುದ್ದೀನ್ ಉವೈಸಿ ಅವರನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್, ಆಗಿ ನೇಮಿಸಿದ್ದಾರೆ. ಚುನಾಯಿತ ಸದಸ್ಯರಲ್ಲಿ ಒಬ್ಬರನ್ನು ಸ್ಪೀಕರ್ ಆಗಿ ನೇಮಿಸುವವರೆಗೆ ಅಕ್ಬರುದ್ದೀನ್ ಸ್ಪೀಕರ್ ಆಗಿ ಅಧಿವೇಶನ ನಿರ್ವಹಿಸಲಿದ್ದಾರೆ.

Join Whatsapp