ಅಖಾರ ಪರಿಷತ್ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಅನುಮಾನಾಸ್ಪದ ಸಾವು

Prasthutha|

ಅಲಹಾಬಾದ್: ಅಖಿಲ ಭಾರತೀಯ ಅಖಾರ ಪರಿಷತ್ ಅಧ್ಯಕ್ಷ ನರೇಂದ್ರ ಗಿರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ ಎಂದು ಪ್ರಯಾಗರಾಜ್ ಅಶ್ರಮದ ಮೂಲಗಳು ತಿಳಿಸಿವೆ.

ಪ್ರಯಾಗರಾಜ್ ಆಶ್ರಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಇದೊಂದು ವ್ಯವಸ್ಥಿತ ಕೊಲೆಯೆಂದು ಶಿಷ್ಯಂದಿರು ಆರೋಪಿಸಿದ್ದಾರೆ. ಮಾತ್ರವಲ್ಲ ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ.

- Advertisement -

ಈ ಮಧ್ಯೆ ಮೃತ ದೇಹದ ಬಳಿ ಆತ್ಮಹತ್ಯೆಗೆ ಸಂಬಂಧಿಸಿದ ಪತ್ರವೊಂದನ್ನು ಪೊಲೀಸರು ಪತ್ತೆಹಚ್ಚಿದ್ದು, ಇದೊಂದು ಆತ್ಮಹತ್ಯಾ ಪ್ರಕರಣ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ಪ್ರಯಾಗ್ ರಾಜ್ ಐಜಿ ಕೆ.ಪಿ ಸಿಂಗ್ ತಿಳಿಸಿದ್ದಾರೆ.

- Advertisement -