ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಅಬೂಬಕರ್ ಪಲ್ಲಮಜಲು ಕೋವಿಡ್‌ನಿಂದ ಮೃತ

Prasthutha|

ಮಂಗಳೂರು: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅಖಿಲ ಭಾರತ ಬ್ಯಾರಿ ಪರಿಷತ್, ಮಂಗಳೂರು ಇದರ ಅಧ್ಯಕ್ಷರಾದ ಅಬೂಬಕರ್ ಪಲ್ಲಮಜಲು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಕೋವಿಡ್ ಪಾಸಿಟಿವ್ ವರದಿಯಾಗಿದ್ದ ಅವರನ್ನು ಐದು ದಿನಗಳ ಹಿಂದೆ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದ 48 ವರ್ಷದ ಅಬೂಬಕರ್, ಪಲ್ಲಮಜಲು ಹಯಾತುಲ್ ಇಸ್ಲಾಂ ಜುಮಾ ಮಸೀದಿಯ ಮಾಜಿ ಅಧ್ಯಕ್ಷರಾಗಿದ್ದರು.

- Advertisement -

ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

- Advertisement -