ಸಮಾಜವಾದಿ ಪಕ್ಷದೊಂದಿಗೆ ಮೈತ್ರಿಯಿಲ್ಲ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್

Prasthutha|

ಲಕ್ನೋ: ಮುಂದಿನ ತಿಂಗಳು ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದೊಂದಿಗೆ ಯಾವುದೇ ರೀತಿಯಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್ ಶನಿವಾರ ತಿಳಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ದಲಿತರ ಬೆಂಬಲವನ್ನು ಬಯಸುವುದಿಲ್ಲ ಎಂದು ತಿಳಿಸಿದರು.

ನಿನ್ನೆ ನಡೆದ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಅಖಿಲೇಶ್ ಯಾದವ್ ಬಹುಜನ ಸಮಾಜವನ್ನು ಅವಮಾನಿಸಿದ್ದಾರೆ ಎಂದು ಆಝಾದ್ ಆರೋಪಿಸಿದ್ದಾರೆ.

- Advertisement -

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದರ್ ಅವರನ್ನು ಭೇಟಿಯಾಗಿ ದಲಿತರಿಗೆ ಸೀಟು ಹಂಚಿಕೆಯ ಕುರಿತು ಚರ್ಚೆ ನಡೆಸಿದ ಒಂದು ದಿನದ ಬಳಿಕ ಆಝಾದ್ ಅವರಿಂದ ಈ ಹೇಳಿಕೆ ಹೊರ ಬಿದ್ದಿರುವುದು ಸಾಕಷ್ಟು ಕುತೂಹಲ ಸೃಷ್ಟಿಸಿದೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಝಾದ್, ಭೀಮ್ ಆರ್ಮಿ ಪಕ್ಷಕ್ಕೆ 10 ಸೀಟುಗಳ ಬೇಡಿಕೆಯನ್ನು ಅಖಿಲೇಖ್ ತಿರಸ್ಕರಿಸಿ ಕೇವಲ 3 ಸೀಟಿಗೆ ಸೀಮೊತಗೊಳಿಸಿ ದಲಿತರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.



Join Whatsapp