ನವದೆಹಲಿ: ಜೆಡಿಯು ನಾಯಕ ನಿತೀಶ್ ಕುಮಾರ್ ಪ್ರಯತ್ನದ ಫಲವಾಗಿ ಹುಟ್ಟಿಕೊಂಡ ಇಂಡಿಯಾ ಮೈತ್ರಿ ಕೂಸು ಇದೀಗ ಬಡವಾಗಿದೆ. ಒಂದೊಂದು ಪಕ್ಷಗಳು ಇಂಡಿಯಾ ತೊರೆಯುತ್ತಿವೆ. ಸಮಾಜವಾದಿ ಪಾರ್ಟಿ ಕೂಡ ಮೈತ್ರಿಯಿಂದ ಒಂದು ಕಾಲು ಹೊರಗಿಟ್ಟಿರುವ ಸೂಚನೆ ನೀಡಿದೆ.
ನಿತೀಶ್ ಕುಮಾರ್ ನಿರ್ಧಾರದ ಕುರಿತು ಪ್ರತಿಕ್ರಿಯಿಸಿರುವ ಸಮಾಜವಾದಿ ಪಾರ್ಟಿ ಮುಖಂಡ ಅಖಿಲೇಶ್ ಯಾದವ್, ನಿತೀಶ್ ಮೈತ್ರಿ ಮುರಿದುಕೊಳ್ಳಲು ಕಾಂಗ್ರೆಸ್ ನೇರ ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ. ನಿತೀಶ್ ಇಂಡಿಯಾ ಒಕ್ಕೂಟದಲ್ಲಿದ್ದರೆ ಪ್ರಧಾನಿ ಅಭ್ಯರ್ಥಿಯಾಗುತ್ತಿದ್ದರು. ಆದರೆ ಕಾಂಗ್ರೆಸ್ ಕುತಂತ್ರಕ್ಕೆ ನಿತೀಶ್ ಮೈತ್ರಿ ತೊರೆದಿದ್ದಾರೆ ಎಂದು ಅಖಿಲೇಶ್ ಹೇಳಿದ್ದಾರೆ. ಈ ಮೂಲಕ ಇಂಡಿಯಾ ಮೈತ್ರಿ ಒಕ್ಕೂಟದಲ್ಲಿರುವ ಸಮಾಜವಾದಿ ಪಾರ್ಟಿ ಕೂಡ ಮೈತ್ರಿಯಿಂದ ಒಂದು ಕಾಲು ಹೊರಗಿಟ್ಟಿರುವ ಸೂಚನೆ ನೀಡಿದ್ದಾರೆ.
ಬಿಹಾರದಲ್ಲಿ ರಾಜಕೀಯ ಬೆಳವಣಿಗೆ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಇಂಡಿಯಾ ಒಕ್ಕೂಟವನ್ನು ರಚಿಸಿ, 27ಕ್ಕೂ ಹೆಚ್ಚು ಪಕ್ಷಗಳನ್ನು ಒಗ್ಗೂಟಿಸಿ ಮೈತ್ರಿ ರಚನೆ ಮಾಡಿರುವ ನಿತೀಶ್ ಕುಮಾರ್, ಇಂಡಿಯಾ ಒಕ್ಕೂಟದ ಸೂಕ್ತ ಪ್ರಧಾನಿ ಅಭ್ಯರ್ಥಿ. ಆದರೆ ಕಾಂಗ್ರೆಸ್ ಅಧಿಪತ್ಯ ಸಾಧಿಸುವ ಹುನ್ನಾರದಲ್ಲಿ ನಿತೀಶ್ ಕುಮಾರ್ ಮೈತ್ರಿಯಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ. ಕ್ಷಿಪ್ರ ಬೆಳವಣಿಗಿಗೆ ಕಾಂಗ್ರೆಸ್ ಕಾರಣ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.