ನನ್ನ ಹೆಲಿಕಾಪ್ಟರ್ ವಿಳಂಬದ ಹಿಂದೆ ಬಿಜೆಪಿಯ ಕೈವಾಡ । ಅಖಿಲೇಶ್ ಯಾದವ್ ಆರೋಪ

Prasthutha|

ನವದೆಹಲಿ: ದೆಹಲಿಯಿಂದ ಉತ್ತರ ಪ್ರದೇಶದ ಮುಝಫರ್ ನಗರಕ್ಕೆ ಪ್ರಯಾಣಿಸಬೇಕಾಗಿದ್ದ ತನ್ನ ಹೆಲಿಕಾಪ್ಟರ್ ಅನ್ನು ಸ್ವಲ್ಪ ಸಮಯದವರೆಗೆ ತಡೆದು ನಿಲ್ಲಿಸಲಾಗಿದ್ದು, ಇದರ ಹಿಂದೆ ಬಿಜೆಪಿಯ ಪಿತೂರಿಯಿದೆ ಎಂದು ಮಾಜಿ ಮುಖ್ಯಮಂತ್ರಿ, ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಅವರು ಆಡಳಿತರೂಢ ಬಿಜೆಪಿ ಪಕ್ಷ ತನ್ನ ಹೆಲಿಕಾಪ್ಟರ್ ಅನ್ನು ತಡೆದು ನಿಲ್ಲಿಸಿದ ಅರ್ಧ ಗಂಟೆಯ ಬಳಿಕ ತೀವ್ರ ಹೋರಾಟದ ಹಿನ್ನೆಲೆಯಲ್ಲಿ ಮತ್ತೆ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ನನ್ನ ಹೆಲಿಕಾಪ್ಟರ್ ಅನ್ನು ದೆಹಲಿಯಲ್ಲಿ ವಿನಾ ಕಾರಣ ತಡೆದು ನಿಲ್ಲಿಸಲಾಗಿದೆ. ಆದರೆ ಬಿಜೆಪಿ ನಾಯಕರಿಗೆ ಹಾರಾಟ ನಡೆಸಲು ಅವಕಾಶ ನೀಡಲಾಗಿದೆ. ಇದರ ಹಿಂದೆ ಬಿಜೆಪಿಯ ಪಿತೂರಿ ಅಡಗಿದೆ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಮಾತ್ರವಲ್ಲ ಹೆಲಿಕಾಪ್ಟರ್ ಮುಂದೆ ನಿಂತಿರುವ ಫೋಟೋವನ್ನು ಕೂಡ ಹಂಚಿಕೊಂಡಿದ್ದಾರೆ.

ಈ ಎಲ್ಲಾ ಬೆಳವಣಿಗೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದೆ ಎಂದು ತಿಳಿಸಿದ್ದಾರೆ.

Join Whatsapp