ಬಿಜೆಪಿ ಸೇರ್ಪಡೆಗೊಂಡಿರುವ ಮಾಜಿ ಅಧಿಕಾರಿಗಳ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಅಖಿಲೇಶ್ ಯಾದವ್

Prasthutha|

ಲಕ್ನೋ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಒಳಗೊಂಡಂತೆ ಅನೇಕ ವರ್ಷಗಳ ಹಿಂದೆ ಬಿಜೆಪಿ ಸೇರ್ಪಡೆಗೊಂಡಿರುವ ನಿವೃತ್ತ ಅಧಿಕಾರಿಗಳ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಿಳಿಸಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, ಬಿಜೆಪಿ ಸೇರ್ಪಡೆಯಾಗುವ ಎಲ್ಲಾ ಅಧಿಕಾರಿಗಳ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತೇನೆ. ಆಯೋಗ ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳದಿದ್ದರೆ ಕಾನೂನು ಹೋರಾಟ ನಡೆಸಲಾಗುವುದೆಂದು ತಿಳಿಸಿದರು.

ಸ್ವಯಂ ನಿವೃತ್ತಿ ಪಡೆಯುವ ಮೊದಲು ಕಾನ್ಪುರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದ ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಅವರು ಭಾನುವಾರ ಬಿಜೆಪಿ ಸೇರ್ಪಡೆಯಾಗಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕನೌಜ್ ಕ್ಷೇತ್ರದಿಂದ ಅವರು ಕಣಕ್ಕಿಳಿಯುವ ಸಾಧ್ಯತೆಯಿದೆ ಮೂಲಗಳು ತಿಳಿಸಿವೆ.

Join Whatsapp