ಉತ್ತರ ಪ್ರದೇಶ: ಅಖಿಲೇಶ್ ಯಾದವ್ ಆಪ್ತನ ನಿವಾಸದ ಮೇಲೆ ಐಟಿ ದಾಳಿ

Prasthutha|

ಲಕ್ನೋ: ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಾಜೀವ್ ರೈ ಅವರ ನಿವಾಸದ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisement -

ಘಟನೆಯ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ರಾಜೀವ್ ರೈ, ಯಾವುದೇ ರೀತಿಯ ಕ್ರಿಮಿನಲ್ ಹಿನ್ನೆಲೆ ಇಲ್ಲದ ಅಥವಾ ಕಪ್ಪು ಹಣ ಹೊಂದಿರದ ನನ್ನ ಮೇಲೆ ಆದಿತ್ಯನಾಥ್ ಸರ್ಕಾರ ದ್ವೇಷ ರಾಜಕೀಯಕ್ಕಾಗಿ ಐಟಿ ದಾಳಿ ನಡೆಸಿದೆ ಎಂದು ಆರೋಪಿಸಿದ್ದಾರೆ.

2014 ರ ಘೋಸಿ ಕ್ಷೇತ್ರದಿಂದ ಲೋಕಸಭಾ ಅಭ್ಯರ್ಥಿಯಾಗಿದ್ದ ರೈ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ವಕ್ತಾರರಾಗಿದ್ದಾರೆ. ಮಾತ್ರವಲ್ಲ ಸಮಾಜವಾದಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

- Advertisement -

ಇತ್ತೀಚೆಗೆ ಯಾದವ್ ಕುಟುಂಬದ ಭದ್ರಕೋಟೆಯಾದ ಮೈನ್ ಪುರಿಯಲ್ಲಿ ಅಖಿಲೇಶ್ ಯಾದವ್ ಅವರ ಮತ್ತೊಬ್ಬ ಆಪ್ತ ಸಹಾಯಕ ಮನೋಜ್ ಯಾದವ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.



Join Whatsapp