ಲಖಿಂಪುರ ಖೇರಿಗೆ ಹೊರಟಿದ್ದ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಬಂಧನ

Prasthutha|

ಲಕ್ನೋ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿ ಇಬ್ಬರು ರೈತರನ್ನು ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದ ಸಮಾಜವಾದಿ ಪಕ್ಷದ ಮುಖಂಡ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

- Advertisement -


ಲಖಿಂಪುರ ಖೇರಿಗೆ ತೆರಳಲು ಅಖಿಲೇಶ್ ಅವರಿಗೆ ಅನುಮತಿ ನಿರಾಕರಿಸಲಾಗಿತ್ತು. ಇದನ್ನು ಪ್ರತಿಭಟಿಸಿ ಸೋಮವಾರ ಧರಣಿಗೆ ಮುಂದಾದ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಲು ಲಖಿಂಪುರಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿಯನ್ನು ಕೂಡ ಈಗಾಗಲೇ ಬಂಧಿಸಲಾಗಿದೆ.


ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಮತ್ತು ಕೇಂದ್ರ ಸಹಾಯಕ ಗೃಹ ಸಚಿವ ಅಜಯ್ ಮಿಶ್ರಾ ಅವರ ಭೇಟಿಯನ್ನು ವಿರೋಧಿಸಿ ನಿನ್ನೆ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಅಜಯ್ ಮಿಶ್ರಾ ಪುತ್ರನಿದ್ದ ಕಾರು ಹರಿದು ಇಬ್ಬರು ರೈತರು ಸಾವನ್ನಪ್ಪಿದ್ದರು. ಇದಾದ ಬಳಿಕ ಉಂಟಾದ ಹಿಂಸಾಚಾರದಲ್ಲಿ ಏಳು ಮಂದಿ ಸಾವನ್ನಪ್ಪಿದ್ದರು.

Join Whatsapp