ಆಲ್ದೂರು: ಸಂಪೂರ್ಣ ಹದಗೆಟ್ಟ ರಸ್ತೆ; ತೊಂದರೆ ಅನುಭವಿಸುತ್ತಿರುವ ಗ್ರಾಮಸ್ಥರು

Prasthutha: June 24, 2022

ಚಿಕ್ಕಮಗಳೂರು: ಆಲ್ದೂರು  ಸಮೀಪದ ಮಾಚಗೊಂಡನಹಳ್ಳಿಯ ಅಂಬೇಡ್ಕರ್ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರವಾಗಿದ್ದು, ರಸ್ತೆಯನ್ನು ಅಭಿವೃದ್ಧಿಪಡಿಸಿ ಸಂಚಾರಕ್ಕೆ ಯೋಗ್ಯವಾಗಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಹಿರಿಯ ಪ್ರಾಥಮಿಕ ಪಾಠಶಾಲೆ, ಸರ್ಕಾರಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಪಶು ಆಸ್ಪತ್ರೆಗೆ ಇದೇ ರಸ್ತೆಯ ಮೂಲಕ ಸಂಚರಿಸಬೇಕಿದ್ದು, ಮಳೆಗಾಲದಲ್ಲಿ ಕೆಸರು ಗದ್ದೆಯಂತಾಗುವ ಈ ರಸ್ತೆಯಲ್ಲಿ ಸಂಚರಿಸುವುದು ಕಷ್ಟವಾಗಿದೆ. ರೋಗಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು, ಭಾನುವಾರ ನಡೆಯುವ ವಾರದ ಸಂತೆಗೆ ಬರಲು ಜನರು ತೊಂದರೆ ಅನುಭವಿಸುತ್ತಿದ್ದಾರೆ. 250 ಮೀಟರ್‌ ಉದ್ದವಿರುವ ಈ ರಸ್ತೆ ಹೊಂಡಗಳಿಂದ ತುಂಬಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

‘ಎರಡೂವರೆ ದಶಕಗಳಿಂದ ಈ ರಸ್ತೆಯ ಅಭಿವೃದ್ಧಿಯು ಕನಸಾಗಿಯೇ ಉಳಿದಿದೆ.ರಸ್ತೆ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ಅನುದಾನದ ಕೊರತೆ ಇದ್ದು, ಶಾಸಕರಿಗೆ ಮನವಿ ಮಾಡಲಾಗಿದೆ ಎಂದು ಪಿಡಿಒ ಪರಶುರಾಮ್‌ ಹೇಳಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!