ರಾಮಮಂದಿರ ಉದ್ಘಾಟನೆ ದಿನ ಎಲ್ಲೆಡೆ ಕಟ್ಟೆಚ್ಚರ ವಹಿಸಲು ಸೂಚನೆ: ಗೃಹ ಸಚಿವ ಪರಮೇಶ್ವರ್

Prasthutha|

ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ಜ.22 ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನೆ ದಿನದಂದು ರಾಜ್ಯದಲ್ಲಿ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

- Advertisement -


ಸದಾಶಿವನಗರ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಎಲ್ಲ ಜಿಲ್ಲೆಗಳ ಎಸ್ಪಿಗಳಿಗೂ ಕಟ್ಟೆಚ್ಚರದಲ್ಲಿರುವಂತೆ ಹೇಳಿದ್ದೇವೆ. ಸೂಕ್ಷ್ಮ ವಿಚಾರವಾಗಿದ್ದು, ಎಚ್ಚರದಿಂದಿರಲು ಸೂಚಿಸಿದ್ದೇವೆ. ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ. ಅಂದು ಪೂಜೆ ಪುರಸ್ಕಾರಗಳು ನಡೆಯಲಿವೆ. ಪೂಜೆಗೆ ಅಡ್ಡಿ ಇಲ್ಲ. ಆದರೆ ಕಾನೂನು ವಿರೋಧಿ ಚಟುವಟಿಕೆ ನಡೆಯದಂತೆ ನೋಡಿಕೊಳ್ಳಲು ಹೇಳಿದ್ದೇವೆ ಎಂದರು.



Join Whatsapp