Alert : ಕಂಪಿಸಿದ ಮೊಬೈಲ್

Prasthutha|

ಬೆಂಗಳೂರು : ಭಾರತದ ದೂರಸಂಪರ್ಕ ಇಲಾಖೆ (DOT ), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ವಿಪತ್ತು ಸಂದರ್ಭದಲ್ಲಿ ಜನರಿಗೆ ನೀಡಲಾಗುವ ಎಚ್ಚರಿಕೆಯ ಸೂಚನೆಯ ಬಗ್ಗೆ ಇಂದು ಪ್ರಾಯೋಗಿಕ ಪರೀಕ್ಷೆ ನಡೆಸಿದೆ.

- Advertisement -


ಈ ಸಂದರ್ಭದಲ್ಲಿ ಧ್ವನಿ ಮತ್ತು ಕಂಪನದೊಂದಿಗೆ ಮೊಬೈಲ್ ಫೋನ್ ಗೆ ಎಚ್ಚರಿಕೆಯ ಸಂದೇಶ ಬಂದಿದೆ.


ಈ ಎಚ್ಚರಿಕೆಗಳು ವಿಪತ್ತು ಸಂದರ್ಭದಲ್ಲಿ ಜನರನ್ನು ಎಚ್ಚರಿಸುವ ಯೋಜಿತ ಪರೀಕ್ಷಾ ಪ್ರಕ್ರಿಯೆಯ ಭಾಗವಾಗಿದೆ.

- Advertisement -

ದೇಶದ ಜನರ ಸುರಕ್ಷತೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೂಲಕ ದೇಶವ್ಯಾಪಿ ತುರ್ತು ಸಂದರ್ಭದಲ್ಲಿ ಎಚ್ಚರಿಕೆಯ ಸಂದೇಶ ನೀಡುವ ಪ್ರಯೋಗ ನಡೆಸಿರುವುದಾಗಿ ಇಲಾಖೆ ಹೇಳಿದೆ. ಇಂಥ ಪ್ರಯೋಗಗಳನ್ನು ಹಲವು ಪ್ರದೇಶಗಳಲ್ಲಿ ಹಾಗೂ ಬೇರೆ ಬೇರೆ ಸಮಯಗಳಲ್ಲಿ ನಡೆಸಲಾಗುವುದು. ಆ ಮೂಲಕ ಸಂದೇಶ ಕಳುಹಿಸುವ ವ್ಯವಸ್ಥೆ ಮತ್ತು ಅದರ ಪರಿಣಾಮಗಳ ಕುರಿತು ಪರೀಕ್ಷೆಗಳನ್ನು ನಡೆಸಲಾಗುವುದು ಎಂದಿದೆ.



Join Whatsapp