Home ಟಾಪ್ ಸುದ್ದಿಗಳು ಕಾಶಿಯ ಗ್ಯಾನ್ ವಾಪಿ ಮಸೀದಿಯ ಸಂಕೀರ್ಣದ ಸಮೀಕ್ಷೆ: ಕೇಂದ್ರ, ಉ.ಪ್ರ. ಸರ್ಕಾರಗಳಿಗೆ ನೋಟಿಸ್ ಜಾರಿ

ಕಾಶಿಯ ಗ್ಯಾನ್ ವಾಪಿ ಮಸೀದಿಯ ಸಂಕೀರ್ಣದ ಸಮೀಕ್ಷೆ: ಕೇಂದ್ರ, ಉ.ಪ್ರ. ಸರ್ಕಾರಗಳಿಗೆ ನೋಟಿಸ್ ಜಾರಿ

ವಾರಾಣಸಿ: ಕಾಶಿ ವಿಶ್ವನಾಥ ದೇಗುಲದ ಪಕ್ಕದ ಗ್ಯಾನ್ ವಾಪಿ ಮಸೀದಿಯನ್ನು ಭಾರತೀಯ ಪುರಾತತ್ವ ಸಂಸ್ಥೆಯ ಸಮೀಕ್ಷೆಗೆ ಒಳಪಡಿಸುವಂತೆ ವಾರಾಣಸಿ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯಿಸಲು ಅಲಾಹಾಬಾದ್ ಹೈಕೋರ್ಟ್ ಕೇಂದ್ರ ಹಾಗೂ ಉ.ಪ್ರ ಸರ್ಕಾರಗಳಿಗೆ ಮೂರು ವಾರಗಳ ಕಾಲಾವಕಾಶ ನೀಡಿದೆ.


ಪ್ರಸಿದ್ಧ ಯಾತ್ರಾಸ್ಥಳ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ವಾರಣಾಸಿ ನ್ಯಾಯಾಲಯವು ಇತ್ತೀಚೆಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಂಡಳಿಗೆ (ಎಎಸ್‌ಐ) ಅನುಮತಿ ನೀಡಿತ್ತು. ಇದನ್ನು ಮಸೀದಿಯ ಆಡಳಿತ ಮಂಡಳಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಪ್ರಶ್ನಿಸಿತ್ತು.


ಜ್ಞಾನವಾಪಿ ಮಸೀದಿ ಇರುವ ಭೂಮಿಯನ್ನು ಹಿಂದೂಗಳಿಗೆ ಹಸ್ತಾಂತರಿಸುವಂತೆ ಕೋರಿ ವಕೀಲ ವಿಜಯ್ ಶಂಕರ್ ರಸ್ತೋಗಿ ಎಂಬವರು ಅರ್ಜಿ ಸಲ್ಲಿಸಿದ್ದರು. ಕಾಶಿ ವಿಶ್ವನಾಥ ದೇವಾಲಯದ ಒಂದು ಭಾಗವನ್ನು ನೆಲಸಮ ಮಾಡಿದ ನಂತರ 1664 ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬ್ ಈ ಮಸೀದಿಯನ್ನು ನಿರ್ಮಿಸಿದನೆಂದು ಅರ್ಜಿದಾರರು ದೂರಿದ್ದರು.

Join Whatsapp
Exit mobile version